Genesis 4:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಾಯಿನ ಮತ್ತು ಅವನ ಹೆಂಡತಿಗೆ ಒಂದು ಗಂಡುಮಗು ಹುಟ್ಟಿತು. ಅವರು ಆ ಮಗುವಿಗೆ ಹನೋಕ ಎಂದು ಹೆಸರಿಟ್ಟರು. ಕಾಯಿನನು ಒಂದು ಊರನ್ನು ಕಟ್ಟಿದನು. ಆ ಊರಿಗೆ ಅವನು ತನ್ನ ಮಗನ ಹೆಸರನ್ನೇ ಇಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಾಯಿನನು ತನ್ನ ಹೆಂಡತಿಯನ್ನು ಸಂಗಮಿಸಲು ಅವಳು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಇದಲ್ಲದೆ ಕಾಯಿನನು ಒಂದು ಊರನ್ನು ಕಟ್ಟಿ ಅದಕ್ಕೆ ಹನೋಕ್ ಎಂದು ತನ್ನ ಮಗನ ಹೆಸರಿಟ್ಟನು.
Kannada BSI Bible 2016
ಕಾಯಿನನು ತನ್ನ ಹೆಂಡತಿಯನ್ನು ಕೂಡಿದನು; ಆಕೆಯು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಆಗ ಕಾಯಿನನು ಒಂದು ಪಟ್ಟಣವನ್ನು ಕಟ್ಟಿ ತನ್ನ ಮಗನಾದ ಹನೋಕನ ಹೆಸರನ್ನು ಆ ಪಟ್ಟಣಕ್ಕೆ ಇಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಾಯಿನನು ತನ್ನ ಹೆಂಡತಿಯನ್ನು ಕೂಡಲು ಅವಳು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಇದಲ್ಲದೆ ಕಾಯಿನನು ಒಂದು ಊರನ್ನು ಕಟ್ಟಿ ಅದಕ್ಕೆ ಹನೋಕ ಎಂದು ತನ್ನ ಮಗನ ಹೆಸರಿಟ್ಟನು. ಹನೋಕನಿಂದ ಈರಾದನು ಹುಟ್ಟಿದನು.
Kannada Bible (KNCL) BSI 2016
ಕಾಯಿನನು ತನ್ನ ಹೆಂಡತಿಯ ಜೊತೆ ಕೂಡಲು ಆಕೆ ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ತಾನು ಕಟ್ಟಿದ ಊರಿಗೆ ಕಾಯಿನನು ‘ಹನೋಕ’ ಎಂದು ತನ್ನ ಮಗನ ಹೆಸರನ್ನೇ ಇಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಾಯಿನನು ತನ್ನ ಹೆಂಡತಿಯನ್ನು ಕೂಡಲು, ಅವಳು ಗರ್ಭಿಣಿಯಾಗಿ ಹನೋಕನನ್ನು ಪಡೆದಳು. ಇದಲ್ಲದೆ ಕಾಯಿನನು ಒಂದು ಊರನ್ನು ಕಟ್ಟಿ, ಅದಕ್ಕೆ ಹನೋಕ್ ಎಂದು ತನ್ನ ಮಗನ ಹೆಸರನ್ನಿಟ್ಟನು.