Genesis 4:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದಳಿಗೆ ಯಾಬಾಲ ಎಂಬ ಮಗನು ಹುಟ್ಟಿದನು. ಗುಡಾರಗಳಲ್ಲಿದ್ದುಕೊಂಡು ಪಶುಗಳನ್ನು ಸಾಕಿಕೊಂಡು ಜೀವನ ಮಾಡುತ್ತಿದ್ದ ಜನರಿಗೆ ಯಾಬಾಲನೇ ಮೂಲಪಿತೃ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಾಳು ಯಾಬಾಲನನ್ನು ಹೆತ್ತಳು; ದನಕರುಗಳನ್ನು ಸಾಕುತ್ತಾ ಗುಡಾರಗಳಲ್ಲಿ ವಾಸಿಸುವವರೆಲ್ಲರ ಮೂಲ ಪುರುಷನು ಇವನೇ.
Kannada BSI Bible 2016
ಆದಾ ಯಾಬಾಲನನ್ನು ಹೆತ್ತಳು; ಇವನು ಗುಡಾರಗಳಲ್ಲಿ ವಾಸಿಸುವವನಾಗಿ ದನಕರು ಗಳಿದ್ದವರಿಗೆ ತಂದೆಯಾದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಳು ಯಾಬಾಲನನ್ನು ಹೆತ್ತಳು; ದನಕರುಗಳನ್ನು ಸಾಕುವವರಾಗಿದ್ದು ಗುಡಾರಗಳಲ್ಲಿ ವಾಸಿಸುವವರೆಲ್ಲರ ಮೂಲಪುರುಷನು ಇವನೇ.
Kannada Bible (KNCL) BSI 2016
ಆದಾಳು ಯಾಬಾಲನನ್ನು ಹೆತ್ತಳು. ಗುಡಾರಗಳಲ್ಲಿದ್ದು ದನಕರುಗಳನ್ನು ಸಾಕುವವರಿಗೆ ಇವನೇ ಮೂಲಪುರುಷ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಾಳು ಯಾಬಾಲನನ್ನು ಹೆತ್ತಳು. ಪಶುಗಳನ್ನು ಸಾಕುತ್ತಾ, ಗುಡಾರಗಳಲ್ಲಿ ವಾಸಿಸುವವರೆಲ್ಲರ ಮೂಲಪುರುಷನು ಇವನೇ.