Genesis 4:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಚಿಲ್ಲಾಳಿಗೆ ತೂಬಲ್‌ಕಾಯಿನ ಎಂಬ ಮಗನು ಹುಟ್ಟಿದನು. ಕಬ್ಬಿಣ ಮತ್ತು ತಾಮ್ರಗಳಿಂದ ಉಪಕರಣ ಮಾಡುತ್ತಿದ್ದವರಿಗೆ ತೂಬಲ್‌ಕಾಯಿನನೇ ಮೂಲಪಿತೃ. ತೂಬಲ್‌ಕಾಯಿನನ ತಂಗಿ ನಯಮಾ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚಿಲ್ಲಾ ಎಂಬುವವಳು ತೂಬಲ್ ಕಾಯಿನನನ್ನು ಹೆತ್ತಳು. ಇವನು ಕಬ್ಬಿಣ ಮತ್ತು ತಾಮ್ರದ ಆಯುಧಗಳನ್ನು ಮಾಡುವ ಕುಲುಮೆಗಾರರಿಗೆ ಮೂಲ ಪುರುಷ. ತೂಬಲ್ ಕಾಯಿನನ ತಂಗಿಯ ಹೆಸರು ನಯಮಾ.
Kannada BSI Bible 2016
ಚಿಲ್ಲಾ ಸಹ ತೂಬಲ್‌ಕಾಯಿನನನ್ನು ಹೆತ್ತಳು; ಅವನು ಹಿತ್ತಾಳೆ ಕಬ್ಬಿಣ ಕೆಲಸದ ಕಲೆಯಿದ್ದವರೆಲ್ಲರಿಗೆ ಶಿಕ್ಷಣ ಕೊಡುವವನಾಗಿದ್ದನು. ತೂಬಲ್‌ಕಾಯಿನನ ಸಹೋದರಿ ನಯಮಾ ಎಂಬವಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಚಿಲ್ಲಾ ಎಂಬವಳು ತೂಬಲ್‍ಕಾಯಿನನನ್ನು ಹೆತ್ತಳು; ಅವನು ಕುಲಿಮೆ ಮಾಡಿ ಕಬ್ಬಿಣ ತಾಮ್ರದ ಆಯುಧಗಳನ್ನು ಕಲ್ಪಿಸಿದವನು. ತೂಬಲ್‍ಕಾಯಿನನ ತಂಗಿ ನಯಮಾ.
Kannada Bible (KNCL) BSI 2016
ಚಿಲ್ಲಾ ಎಂಬುವಳು ತೂಬಲ್ ಕಾಯಿನನಿಗೆ ಜನ್ಮವಿತ್ತಳು. ಇವನು ಕಬ್ಬಿಣ, ಹಿತ್ತಾಳೆ ಆಯುಧಗಳನ್ನು ಮಾಡುವ ಕುಲುಮೆಗಾರರಿಗೆ ಮೂಲಪುರುಷ. ತೂಬಲ್ ಕಾಯಿನನ ತಂಗಿಯ ಹೆಸರು ನಯಮಾ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚಿಲ್ಲಾ ತೂಬಲ್ ಕಾಯಿನನನ್ನು ಪಡೆದಳು. ಅವನು ಕಂಚು ಮತ್ತು ಕಬ್ಬಿಣದ ಆಯುಧಗಳನ್ನು ಮಾಡುವವನಾಗಿದ್ದನು. ತೂಬಲ್ ಕಾಯಿನನ ತಂಗಿಯ ಹೆಸರು ನಯಮಾ.