Genesis 4:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು: “ಆದಾ, ಚಿಲ್ಲಾ, ನನ್ನ ಮಾತನ್ನು ಕೇಳಿ! ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಕೇಳಿ. ಒಬ್ಬನು ನನಗೆ ಗಾಯ ಮಾಡಿದ, ಆದ್ದರಿಂದ ನಾನು ಅವನನ್ನು ಕೊಂದೆ, ಒಬ್ಬ ಯುವಕನು ನನ್ನನ್ನು ಹೊಡೆದ, ಆದ್ದರಿಂದ ನಾನು ಅವನನ್ನು ಕೊಂದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು; “ಆದಾ, ಚಿಲ್ಲಾ, ನನ್ನ ಮಾತಿಗೆ ಕಿವಿಕೊಡಿರಿ; ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಗಮನಿಸಿರಿ. ನನಗೆ ಗಾಯ ಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು; ನನ್ನನ್ನು ಹೊಡೆದ ಒಬ್ಬ ಪ್ರಾಯಸ್ಥನನ್ನು ಹತಮಾಡಿದೆನು.
Kannada BSI Bible 2016
ಲೆಮೆಕನು ತನ್ನ ಹೆಂಡತಿಯರಾದ ಆದಾ ಚಿಲ್ಲಾ ಎಂಬವರಿಗೆ--ಲೆಮೆಕನ ಹೆಂಡತಿಯರೇ, ನನ್ನ ಮಾತನ್ನು ಕೇಳಿರಿ; ನನ್ನ ಮಾತುಗಳಿಗೆ ಕಿವಿಗೊಡಿರಿ; ನನಗೆ ಗಾಯಮಾಡಿದ ಒಬ್ಬ ಮನುಷ್ಯ ನನ್ನು, ನನಗೆ ಹೊಡೆದ ಒಬ್ಬ ಯೌವನಸ್ಥನನ್ನು ಕೊಂದಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು - ಆದಾ, ಚಿಲ್ಲಾ, ನನ್ನ ಮಾತಿಗೆ ಕಿವಿಗೊಡಿರಿ; ಲೆಮೆಕನ ಹೆಂಡತಿಯರೇ, ನಾನು ಹೇಳುವದನ್ನು ಕೇಳಿರಿ. ನನಗೆ ಗಾಯಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು; ನನ್ನನ್ನು ಹೊಡೆದ ಒಬ್ಬ ಪ್ರಾಯಸ್ಥನನ್ನು ಹತಮಾಡಿದೆನು.
Kannada Bible (KNCL) BSI 2016
ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು: ಆದಾ, ಚಿಲ್ಲಾ, ಕೇಳಿ ನಾನು ಹೇಳುವುದನ್ನು ಲೆಮೆಕನ ಸತಿಯರೇ, ಆಲಿಸಿ ನನ್ನ ಮಾತನ್ನು ನಾ ಹತಮಾಡಿದೆ ನನಗೆ ಗಾಯ ಮಾಡಿದವನನ್ನು ನಾ ಕೊಂದೆ ನನ್ನನ್ನು ಹೊಡೆದಾ ಪ್ರಾಯದವನನ್ನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು: “ಆದಾ, ಚಿಲ್ಲಾ, ನನ್ನ ಮಾತನ್ನು ಕೇಳಿರಿ. ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಗಮನಿಸಿರಿ. ನನಗೆ ಗಾಯಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು. ನನ್ನನ್ನು ಹೊಡೆದ ಯುವಕನನ್ನು ಹತ ಮಾಡಿದೆನು.