Genesis 4:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೇತನು ಒಬ್ಬ ಮಗನನ್ನು ಪಡೆದನು. ಆ ಮಗುವಿಗೆ ಅವನು ಎನೋಷ್ ಎಂದು ಹೆಸರಿಟ್ಟನು. ಆ ಕಾಲದಲ್ಲಿ ಜನರು ಯೆಹೋವನ ಮೇಲೆ ಭರವಸೆ ಇಡಲಾರಂಭಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಸೇತನು ಮಗನನ್ನು ಪಡೆದು ಅವನಿಗೆ, “ಎನೋಷ್” ಎಂದು ಹೆಸರಿಟ್ಟನು. ಜನರು, “ಯೆಹೋವ” ಎಂಬ ಹೆಸರನ್ನು ಹೇಳಿಕೊಂಡು ಆರಾಧಿಸುವುದಕ್ಕೆ ಅಂದಿನಿಂದ ಪ್ರಾರಂಭಿಸಿದರು.
Kannada BSI Bible 2016
ಸೇತನಿಗೂ ಒಬ್ಬ ಮಗನು ಹುಟ್ಟಿದನು; ಅವನಿಗೆ ಎನೋಷ್‌ ಎಂದು ಹೆಸರಿಟ್ಟನು; ತರುವಾಯ ಮನುಷ್ಯರು ಕರ್ತನ ಹೆಸರನ್ನು ಕರೆದು ಆರಾಧಿಸುವದಕ್ಕೆ ಆರಂಭಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಸೇತನು ಸಹ ಮಗನನ್ನು ಪಡೆದು ಅವನಿಗೆ ಎನೋಷ್ ಎಂಬ ಹೆಸರಿಟ್ಟನು; ಆ ಕಾಲದಲ್ಲಿ ಯೆಹೋವ ಎಂಬ ಹೆಸರನ್ನು ಹೇಳಿಕೊಂಡು ಆರಾಧಿಸುವದಕ್ಕೆ ಪ್ರಾರಂಭವಾಯಿತು.
Kannada Bible (KNCL) BSI 2016
ತರುವಾಯ ಸೇತನು ಸಹ ಒಬ್ಬ ಮಗನನ್ನು ಪಡೆದು ಅವನಿಗೆ “ಏನೋಷ್” ಎಂದು ಹೆಸರಿಟ್ಟನು. ಜನರು “ಸರ್ವೇಶ್ವರ” ಎಂಬ ಹೆಸರನ್ನು ಆರಾಧಿಸುವುದಕ್ಕೆ ಪ್ರಾರಂಭಿಸಿದ್ದು ಆ ಕಾಲದಲ್ಲಿಯೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೇತನಿಗೆ ಒಬ್ಬ ಮಗನು ಹುಟ್ಟಿದನು. ಅವನಿಗೆ ಎನೋಷ್ ಎಂದು ಹೆಸರಿಟ್ಟನು. ಆ ಕಾಲದಲ್ಲಿ ಜನರು, ಯೆಹೋವ ಎಂಬ ಹೆಸರನ್ನು ಆರಾಧಿಸುವುದಕ್ಕೆ ಪ್ರಾರಂಭಿಸಿದರು.