Genesis 4:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಒಳ್ಳೆಯ ಕಾರ್ಯಗಳನ್ನು ಮಾಡಿದರೆ ನಾನು ನಿನ್ನನ್ನು ಸ್ವೀಕರಿಸಿಕೊಳ್ಳುವೆನು. ಆದರೆ ನೀನು ಕೆಟ್ಟಕಾರ್ಯಗಳನ್ನು ಮಾಡಿದರೆ, ಆ ಪಾಪವು ನಿನ್ನೊಂದಿಗಿರುತ್ತದೆ. ನಿನ್ನ ಪಾಪವು ನಿನ್ನನ್ನು ತನ್ನ ಹಿಡಿತದಲ್ಲಿಟ್ಟುಕೊಳ್ಳಲು ಇಷ್ಟಪಡುತ್ತದೆ. ಆದರೆ ನೀನು ಆ ಪಾಪವನ್ನು ನಿನ್ನ ಹಿಡಿತದಲ್ಲಿಟ್ಟುಕೊಳ್ಳಬೇಕು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಮುಖವು ಕಳೆಗುಂದಲು ಕಾರಣವೇನು? ನೀನು ತಲೆ ತಗ್ಗಿಸಲು ಕಾರಣವೇನು? ನೀನು ಒಳ್ಳೆಯ ಕೆಲಸ ಮಾಡಿದ್ದರೆ ನಿನ್ನ ತಲೆಯು ಎತ್ತಲ್ಪಡುವುದಲ್ಲವೇ? ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವುದು, ಅದು ನಿನ್ನನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವುದು. ಆದರೆ ನೀನು ಅದನ್ನು ಹಿಡಿತದಲ್ಲಿ ಇರಿಸಿಕೊಳ್ಳಬೇಕು” ಎಂದು ಹೇಳಿದನು.
Kannada BSI Bible 2016
ನೀನು ಒಳ್ಳೆಯದನ್ನು ಮಾಡಿದರೆ ಅಂಗೀಕರಿಸಲ್ಪಡುವದಿಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ ಪಾಪವು ಬಾಗಲಲ್ಲಿ ಹೊಂಚಿ ಕೊಂಡಿರುವದು; ನಿನ್ನ ಮೇಲೆ ಅದಕ್ಕೆ ಆಶೆ ಇರುವದು, ನೀನು ಅದನ್ನು ಆಳಬೇಕು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಳ್ಳೇ ಕೆಲಸ ಮಾಡಿದರೆ ನಿನ್ನ ತಲೆ ಎತ್ತಲ್ಪಡುವದಲ್ಲವೇ; ಅಲ್ಲದಿದ್ದರೆ ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವದು; ಆದರೂ ನೀನು ಅದನ್ನು ವಶಮಾಡಿಕೊಳ್ಳಬೇಕು ಎಂದು ಹೇಳಿದನು.
Kannada Bible (KNCL) BSI 2016
ನೀನು ಒಳಿತನ್ನು ಮಾಡಿದ್ದರೆ ತಲೆ ಎತ್ತುತ್ತಿದ್ದೆ; ಕೆಡುಕನ್ನು ಮಾಡಿದ್ದರಿಂದ ಪಾಪವು ಹೊಸ್ತಿಲಲ್ಲಿ ಹೊಂಚುಹಾಕುತ್ತಿದೆ; ಅದು ನಿನ್ನನ್ನು ಬಯಸುತ್ತಿದೆ. ನೀನು ಅದನ್ನು ಜಯಿಸಬೇಕು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಒಳ್ಳೆಯದನ್ನು ಮಾಡಿದರೆ, ನೀನು ಸ್ವೀಕಾರವಾಗುತ್ತಿದ್ದೆ ಅಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ, ಬಾಗಿಲಲ್ಲಿ ಪಾಪವು ಹೊಂಚಿಕೊಂಡಿರುವುದು ಮತ್ತು ಅದು ನಿನ್ನನ್ನು ನುಂಗಲು ಬಯಸುತ್ತದೆ. ಆದರೂ ನೀನು ಅದರ ಮೇಲೆ ಅಧಿಕಾರ ಮಾಡಬೇಕು,” ಎಂದು ಹೇಳಿದರು.