Genesis 4:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕಾಯಿನನು ತನ್ನ ತಮ್ಮನಾದ ಹೇಬೆಲನಿಗೆ, “ನಾವು ಹೊಲಕ್ಕೆ ಹೋಗೋಣ ಬಾ” ಎಂದು ಹೇಳಿದನು. ಅಂತೆಯೇ ಕಾಯಿನನು ಮತ್ತು ಹೇಬೆಲನು ಹೊಲಕ್ಕೆ ಹೋದರು. ಅಲ್ಲಿ ಕಾಯಿನನು ತನ್ನ ತಮ್ಮನ ಮೇಲೆರಗಿ ಅವನನ್ನು ಕೊಂದುಹಾಕಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಕಾಯಿನನು ತನ್ನ ತಮ್ಮನಾದ ಹೇಬೆಲನ ಸಂಗಡ ಮಾತನಾಡಿದನು. ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು.
Kannada BSI Bible 2016
ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಕಾಯಿನನು ತನ್ನ ತಮ್ಮನಾದ ಹೇಬೆಲನಿಗೆ - ಅಡವಿಗೆ ಹೋಗೋಣ ಬಾ ಎಂದನು. ಅಡವಿಗೆ ಬಂದಾಗ ಕಾಯಿನನು ತನ್ನ ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು.
Kannada Bible (KNCL) BSI 2016
ಬಳಿಕ ಕಾಯಿನನು ತಮ್ಮ ಹೇಬೆಲನಿಗೆ, “ಹೊಲಕ್ಕೆ ಹೋಗೋಣ ಬಾ”, ಎಂದು ಕರೆದನು. ಅವರಿಬ್ಬರೂ ಅಲ್ಲಿಗೆ ಬಂದಾಗ ಕಾಯಿನನು ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಕಾಯಿನನು, “ಅಡವಿಗೆ ಹೋಗೋಣ ಬಾ,” ಎಂದು ತನ್ನ ತಮ್ಮನಿಗೆ ಹೇಳಿದನು. ಅವರು ಅಲ್ಲಿ ಬಂದಾಗ ಕಾಯಿನನು ತನ್ನ ತಮ್ಮ ಹೇಬೆಲನ ಮೇಲೆ ದಾಳಿಮಾಡಿ, ಅವನನ್ನು ಕೊಂದುಹಾಕಿದನು.