Genesis 4:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತರುವಾಯ ಯೆಹೋವನು ಕಾಯಿನನಿಗೆ, “ನಿನ್ನ ತಮ್ಮನಾದ ಹೇಬೆಲನೆಲ್ಲಿ?” ಎಂದು ಕೇಳಿದನು. ಅದಕ್ಕೆ ಕಾಯಿನನು, “ನನಗೆ ಗೊತ್ತಿಲ್ಲ. ನನ್ನ ತಮ್ಮನನ್ನು ಕಾಯುವುದಾಗಲಿ ನೋಡಿಕೊಳ್ಳುವುದಾಗಲಿ ನನ್ನ ಕೆಲಸವೇ?” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಕಾಯಿನನಿಗೆ, “ನಿನ್ನ ತಮ್ಮನಾದ ಹೇಬೆಲನು ಎಲ್ಲಿ?” ಎಂದು ಕೇಳಲು ಅವನು, “ನಾನರಿಯೆ, ನನ್ನ ತಮ್ಮನಿಗೆ ನಾನೇನು ಕಾವಲುಗಾರನೋ?” ಎಂದು ಉತ್ತರ ಕೊಟ್ಟನು.
Kannada BSI Bible 2016
ಆಗ ಕರ್ತನು ಕಾಯಿನನಿಗೆ--ನಿನ್ನ ಸಹೋದರ ನಾದ ಹೇಬೆಲನು ಎಲ್ಲಿ ಅಂದನು. ಅದಕ್ಕವನು-- ನಾನು ಅರಿಯೆನು; ನನ್ನ ಸಹೋದರನನ್ನು ನಾನು ಕಾಯುವವನೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಕಾಯಿನನನ್ನು - ನಿನ್ನ ತಮ್ಮನಾದ ಹೇಬೆಲನು ಎಲ್ಲಿ ಎಂದು ಕೇಳಲು ಅವನು - ನಾನರಿಯೆ; ನನ್ನ ತಮ್ಮನನ್ನು ಕಾಯುವವನು ನಾನೋ ಎಂದು ಉತ್ತರಕೊಟ್ಟನು.
Kannada Bible (KNCL) BSI 2016
“ನಿನ್ನ ತಮ್ಮನೆಲ್ಲಿ?\ ಎಂದು ಸರ್ವೇಶ್ವರ ಕೇಳಿದಾಗ “ನಾನರಿಯೆ, ನನ್ನ ತಮ್ಮನಿಗೆ ನಾನೇನು ಕಾವಲುಗಾರನೋ” ಎಂದು ಕಾಯಿನನು ಉತ್ತರ ಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಕಾಯಿನನನ್ನು, “ನಿನ್ನ ತಮ್ಮ ಹೇಬೆಲನು ಎಲ್ಲಿ?” ಎಂದು ಕೇಳಲು, ಅವನು, “ನಾನರಿಯೆ. ನಾನು ನನ್ನ ತಮ್ಮನನ್ನು ಕಾಯುವವನೋ?” ಎಂದು ಉತ್ತರಕೊಟ್ಟನು.