Genesis 40:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತರುವಾಯ ಫರೋಹನ ಇಬ್ಬರು ಸೇವಕರು ಫರೋಹನಿಗೆ ಯಾವುದೋ ತಪ್ಪುಮಾಡಿದರು. ಈ ಇಬ್ಬರು ಸೇವಕರುಗಳಲ್ಲಿ ಒಬ್ಬನು ಭಕ್ಷ್ಯಗಾರ ಮತ್ತೊಬ್ಬನು ಪಾನದಾಯಕ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಸಂಗತಿಗಳಾದ ಮೇಲೆ ಐಗುಪ್ತ ದೇಶದ ಅರಸನಾದ ಫರೋಹನಿಗೆ ಪಾನಗಳನ್ನು ಕೊಡುವವನೂ, ಆಹಾರಗಳನ್ನು ಮಾಡಿ ಕೊಡುವವನೂ ತಮ್ಮ ಅರಸನಿಗೆ ವಿರೋಧವಾಗಿ ಅಪರಾಧ ಮಾಡಿದರು.
Kannada BSI Bible 2016
ಇವುಗಳಾದ ಮೇಲೆ ಐಗುಪ್ತದ ಅರಸನ ಪಾನದಾಯಕನೂ ರೊಟ್ಟಿಗಾರನೂ ಐಗು ಪ್ತದ ಅರಸನಾದ ತಮ್ಮ ಪ್ರಭುವಿಗೆ ಅಪರಾಧ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಸಂಗತಿಗಳಾದ ಮೇಲೆ ಐಗುಪ್ತ ದೇಶದ ಅರಸನಾದ ಫರೋಹನಿಗೆ ಪಾನಕ ಕೊಡುವವನೂ ಭಕ್ಷ್ಯಗಳನ್ನು ಮಾಡಿಕೊಡುವವನೂ
Kannada Bible (KNCL) BSI 2016
ಈ ಘಟನೆಗಳಾದ ಬಳಿಕ ಈಜಿಪ್ಟಿನ ಅರಸನಾದ ಫರೋಹನ ಮುಖ್ಯಪಾನದಾಯಕ ಮತ್ತು ಮುಖ್ಯ ಅಡಿಗೆಭಟ್ಟ ಯಾವುದೋ ವಿಷಯದಲ್ಲಿ ತಮ್ಮ ದಣಿಗೆ ದ್ರೋಹಮಾಡಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆಲವು ಸಮಯದ ನಂತರ ಈಜಿಪ್ಟಿನ ಅರಸನ ಪಾನದಾಯಕನೂ, ರೊಟ್ಟಿಗಾರನೂ ತಮ್ಮ ಅರಸನಿಗೆ ಎದುರಾಗಿ ಅಪರಾಧ ಮಾಡಿದರು.