Genesis 40:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೂರುದಿನಗಳೊಳಗಾಗಿ ಫರೋಹನು ನಿನ್ನನ್ನು ಕ್ಷಮಿಸಿ ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳುವನು. ನೀನು ಮೊದಲಿನಂತೆ ಅವನಿಗೆ ಪಾನದಾಯಕನಾಗಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಹೊತ್ತಿಗೆ ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನನ್ನು ಮೇಲಕ್ಕೆ ಎತ್ತಿ, ನಿನ್ನ ಉದ್ಯೋಗಕ್ಕೆ ಪುನಃ ನಿನ್ನನ್ನು ನೇಮಿಸುವನು. ನೀನು ಮೊದಲು ಫರೋಹನ ಪಾನದಾಯಕನಾಗಿದ್ದು ಅವನ ಕೈಗೆ ಪಾನಪಾತ್ರೆಯನ್ನು ಒಪ್ಪಿಸುತ್ತಿದ್ದಂತೆಯೇ ಮುಂದೆಯೂ ಒಪ್ಪಿಸುವಿ.
Kannada BSI Bible 2016
ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ಎತ್ತಿ ನಿನ್ನನ್ನು ತಿರಿಗಿ ನಿನ್ನ ಸ್ಥಳದಲ್ಲಿ ಇಡುವನು. ನೀನು ಮೊದಲು ಅವನ ಪಾನದಾಯಕನಾಗಿದ್ದ ಹಾಗೆ ಫರೋಹನ ಪಾತ್ರೆಯನ್ನು ಅವನ ಕೈಗೆ ಕೊಡುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮೂರು ಕೊಂಬೆಗಳೇ ಮೂರು ದಿನಗಳು; ಈ ಹೊತ್ತಿಗೆ ಮೂರು ದಿನಗಳೊಳಗೆ ಫರೋಹನು ನಿನ್ನನ್ನು ಮೇಲಕ್ಕೆ ಎತ್ತಿ ನಿನ್ನ ಉದ್ಯೋಗಕ್ಕೆ ತಿರಿಗಿ ನೇವಿುಸುವನು. ನೀನು ಮುಂಚೆ ಫರೋಹನ ಪಾನದಾಯಕನಾಗಿದ್ದು ಅವನ ಕೈಗೆ ಪಾನಪಾತ್ರೆಯನ್ನು ಒಪ್ಪಿಸುತ್ತಿದ್ದಂತೆಯೇ ಮುಂದೆಯೂ ಒಪ್ಪಿಸುವಿ.
Kannada Bible (KNCL) BSI 2016
ಇನ್ನು ಮೂರು ದಿನಗಳೊಳಗೆ ನೀನು ತಲೆಯೆತ್ತುವಂತೆ ಫರೋಹನು ಮಾಡುವನು; ನಿನ್ನನ್ನು ಮರಳಿ ನೌಕರಿಗೆ ಸೇರಿಸಿಕೊಳ್ಳುವನು; ನೀನು ಮುಂದಿನಂತೆಯೇ ಫರೋಹನಿಗೆ ಪಾನಸೇವಕನಾಗಿದ್ದು ಅವನ ಕೈಗೆ ಪಾನಪಾತ್ರೆಯನ್ನು ಒಪ್ಪಿಸುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನನ್ನು ಗೌರವಿಸಿ, ತಿರುಗಿ ನಿನ್ನ ಕೆಲಸದಲ್ಲಿ ಇಡುವನು. ನೀನು ಮೊದಲು ಅವನ ಪಾನದಾಯಕನಾಗಿದ್ದ ಹಾಗೆ ಫರೋಹನ ಪಾತ್ರೆಯನ್ನು ಅವನ ಕೈಗೆ ಕೊಡುವೆ.