Genesis 40:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಸಿಕೊಂಡು ನನ್ನ ವಿಷಯವಾಗಿ ಫರೋಹನಿಗೆ ತಿಳಿಸಿ ನನಗೆ ಸೆರೆಮನೆಯಿಂದ ಬಿಡುಗಡೆಯಾಗುವಂತೆ ಮಾಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನೀನು ಸುಖದಿಂದಿರುವಾಗ ನನ್ನನ್ನು ಜ್ಞಾಪಕಮಾಡಿಕೊಂಡು ನನಗೆ ದಯೆ ತೋರಿಸಿ ಫರೋಹನಿಗೆ ನನ್ನ ಸಂಗತಿಯನ್ನು ತಿಳಿಸಿ ನನ್ನನ್ನು ಈ ಸೆರೆಯಿಂದ ಬಿಡಿಸಬೇಕು.
Kannada BSI Bible 2016
ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಸಿಕೊಂಡು ನನಗೆ ದಯೆತೋರಿಸಿ ಫರೋಹನ ಮುಂದೆ ನನ್ನ ವಿಷಯ ತಿಳಿಸಿ ಈ ಸೆರೆಯೊಳಗಿಂದ ನನ್ನನ್ನು ಹೊರಗೆ ಬರಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನೀನು ಸುಖದಿಂದಿರುವಾಗ ನನ್ನನ್ನು ಜ್ಞಾಪಕಮಾಡಿಕೊಂಡು ನನಗೆ ಉಪಕಾರ ಮಾಡಿ ಫರೋಹನಿಗೆ ನನ್ನ ಸಂಗತಿಯನ್ನು ತಿಳಿಸಿ ನನ್ನನ್ನು ಈ ಸೆರೆಯಿಂದ ಬಿಡಿಸಬೇಕು.
Kannada Bible (KNCL) BSI 2016
ಆದರೆ ನೀನು ಸುಖದಿಂದಿರುವಾಗ ನನ್ನನ್ನು ಮರೆಯದೆ ನನಗೊಂದು ಉಪಕಾರ ಮಾಡು. ಫರೋಹನಿಗೆ ನನ್ನ ವಿಷಯ ತಿಳಿಸಿ ನನ್ನನ್ನು ಈ ಸೆರೆಯಿಂದ ಬಿಡುಗಡೆಮಾಡು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಪಿಸಿಕೊಂಡು, ನನಗೆ ದಯೆತೋರಿಸಿ, ಫರೋಹನ ಮುಂದೆ ನನ್ನ ವಿಷಯ ತಿಳಿಸಿ, ಈ ಸೆರೆಯೊಳಗಿಂದ ನನ್ನನ್ನು ಹೊರಗೆ ಬರುವಂತೆ ಮಾಡಬೇಕು.