Genesis 40:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಬ್ರಿಯರ ದೇಶದವನಾದ ನನ್ನನ್ನು ಕೆಲವರು ಅಪಹರಿಸಿಕೊಂಡು ಬಂದರು. ಆದರೆ ಇಲ್ಲಿಯೂ ನಾನು ಯಾವ ತಪ್ಪನ್ನೂ ಮಾಡಲಿಲ್ಲ. ಆದ್ದರಿಂದ ನಾನು ಸೆರೆಮನೆಯಲ್ಲಿರಬಾರದು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ನಾನು ಇಬ್ರಿಯ ದೇಶದವನು. ಕೆಲವರು ನನ್ನನ್ನು ಕದ್ದು ಈ ದೇಶಕ್ಕೆ ತಂದರು. ಇಲ್ಲಿಯೂ ನಾನು ಯಾವ ತಪ್ಪು ಮಾಡದೆ ಸೆರೆಯಲ್ಲಿ ಬಿದ್ದಿರುವೆನು” ಅಂದನು.
Kannada BSI Bible 2016
ನಾನು ನಿಜವಾಗಿಯೂ ಇಬ್ರಿ ಯರ ದೇಶದೊಳಗಿಂದ ಕದಿಯಲ್ಪಟ್ಟೆನು. ಇಲ್ಲಿಯೂ ಸಹ ನನ್ನನ್ನು ಸೆರೆಯಲ್ಲಿ ಹಾಕುವದಕ್ಕೆ ನಾನು ಏನೂ ಮಾಡಲಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಇಬ್ರಿಯದೇಶಸ್ಥನು; ಕೆಲವರು ನನ್ನನ್ನು ಕದ್ದು ಈ ದೇಶಕ್ಕೆ ತಂದರು. ಇಲ್ಲಿಯೂ ನಾನೇನೂ ತಪ್ಪಿಲ್ಲದವನಾಗಿ ಸೆರೆಯಲ್ಲಿ ಬಿದ್ದೆನು ಅಂದನು.
Kannada Bible (KNCL) BSI 2016
ನಾನು ಹಿಬ್ರಿಯ ದೇಶದವನು. ಕೆಲವರು ನನ್ನನ್ನು ಗುಲಾಮನನ್ನಾಗಿ ಈ ದೇಶಕ್ಕೆ ಹಿಡಿದುತಂದರು. ಇಲ್ಲಿಯೂ ಸೆರೆಗೆ ಗುರಿಯಾಗಿಸುವಂಥ ದ್ರೋಹವನ್ನು ನಾನೇನು ಮಾಡಿಲ್ಲ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನನ್ನನ್ನು ಹಿಬ್ರಿಯರ ದೇಶದೊಳಗಿಂದ ಹಿಡಿದು ತಂದಿದ್ದಾರೆ. ಇಲ್ಲಿಯೂ ಸಹ ನಾನು ಏನೂ ತಪ್ಪುಮಾಡದೆ ಇದ್ದರೂ ನನ್ನನ್ನು ಸೆರೆಯಲ್ಲಿ ಹಾಕಿದರು,” ಎಂದನು.