Genesis 40:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವುಗಳಲ್ಲಿ ರಾಜನಿಗೋಸ್ಕರವಾಗಿ ಎಲ್ಲಾ ಬಗೆಯ ಭಕ್ಷ್ಯಗಳಿದ್ದವು. ಆದರೆ ಪಕ್ಷಿಗಳು ಆ ಆಹಾರವನ್ನು ತಿನ್ನುತ್ತಿದ್ದವು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೇಲಿನ ಪುಟ್ಟಿಯಲ್ಲಿ ಫರೋಹನಿಗೋಸ್ಕರ ಎಲ್ಲಾ ವಿಧವಾದ ರೊಟ್ಟಿ ಪದಾರ್ಥಗಳು ಇದ್ದವು. ಪಕ್ಷಿಗಳು ಬಂದು ಅವುಗಳನ್ನು ನನ್ನ ತಲೆಯ ಮೇಲಿದ್ದ ಪುಟ್ಟಿಯೊಳಗಿಂದಲೇ ತಿಂದುಹಾಕಿದವು” ಎಂದು ಹೇಳಿದನು.
Kannada BSI Bible 2016
ಮೇಲಿನ ಪುಟ್ಟಿಯಲ್ಲಿ ಫರೋಹನಿ ಗೋಸ್ಕರ ರೊಟ್ಟಿಗಾರರು ಮಾಡುವ ಎಲ್ಲಾ ವಿಧವಾದ ಆಹಾರವಿತ್ತು. ನನ್ನ ತಲೆಯ ಮೇಲಿದ್ದ ಪುಟ್ಟಿಯೊ ಳಗಿಂದ ಪಕ್ಷಿಗಳು ಅದನ್ನು ತಿಂದವು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೇಲಣ ಪುಟ್ಟಿಯಲ್ಲಿ ಫರೋಹನಿಗೋಸ್ಕರ ನಾನಾ ವಿಧವಾದ ಭಕ್ಷ್ಯಗಳು ಇದ್ದವು; ಪಕ್ಷಿಗಳು ಬಂದು ಅವುಗಳನ್ನು ನನ್ನ ತಲೆಯ ಮೇಲಿದ್ದ ಪುಟ್ಟಿಯೊಳಗಿಂದಲೇ ತಿನ್ನುತ್ತಿದ್ದವು ಎಂದು ಹೇಳಿದನು.
Kannada Bible (KNCL) BSI 2016
ಮೇಲಣ ಪುಟ್ಟಿಯಲ್ಲಿ ಫರೋಹನಿಗಾಗಿಯೆ ವಿಧವಿಧವಾದ ರೊಟ್ಟಿ ಪದಾರ್ಥಗಳು ಇದ್ದವು. ಪಕ್ಷಿಗಳು ಬಂದು ಅವುಗಳನ್ನು ನನ್ನ ತಲೆಯ ಮೇಲಿದ್ದ ಪುಟ್ಟಿಯಿಂದಲೆ ತಿನ್ನುತ್ತಿದ್ದವು,” ಎಂದು ಹೇಳಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೇಲಿದ್ದ ಪುಟ್ಟಿಯಲ್ಲಿ ಫರೋಹನಿಗೋಸ್ಕರ ರೊಟ್ಟಿಗಾರರು ಮಾಡುವ ಎಲ್ಲಾ ವಿಧವಾದ ಆಹಾರವಿತ್ತು. ನನ್ನ ತಲೆಯ ಮೇಲಿದ್ದ ಪುಟ್ಟಿಯೊಳಗಿದ್ದ ಅದನ್ನು ಪಕ್ಷಿಗಳು ತಿಂದವು,” ಎಂದನು.