Genesis 40:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೂರುದಿನಗಳೊಳಗಾಗಿ ರಾಜನು ನಿನ್ನನ್ನು ಸೆರೆಮನೆಯಿಂದ ಬಿಡಿಸಿ ನಿನ್ನ ಶಿರಚ್ಛೇದನ ಮಾಡಿಸುವನು; ನಿನ್ನ ದೇಹವನ್ನು ಕಂಬಕ್ಕೆ ನೇತುಹಾಕಿಸುವನು; ಪಕ್ಷಿಗಳು ನಿನ್ನ ದೇಹವನ್ನು ತಿಂದುಬಿಡುತ್ತವೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಹೊತ್ತಿಗೆ ಮೂರು ದಿನಗಳೊಳಗೆ ಫರೋಹನು ನಿನ್ನ ತಲೆಯನ್ನು ತೆಗೆಸುವನು, ನಿನ್ನನ್ನು ಮರಕ್ಕೆ ತೂಗು ಹಾಕಿಸುವನು, ಪಕ್ಷಿಗಳು ಬಂದು ನಿನ್ನ ಮಾಂಸವನ್ನು ತಿಂದುಬಿಡುವವು” ಎಂದನು.
Kannada BSI Bible 2016
ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ತೆಗೆಸಿ ನಿನ್ನನ್ನು ಮರದ ಮೇಲೆ ತೂಗಹಾಕಿಸುವನು. ಪಕ್ಷಿಗಳು ನಿನ್ನ ಮಾಂಸವನ್ನು ತಿಂದುಬಿಡುವವು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಹೊತ್ತಿಗೆ ಮೂರು ದಿನಗಳೊಳಗೆ ಫರೋಹನು ನಿನ್ನ ತಲೆಯನ್ನು ಎತ್ತಿಸುವನು; ನಿನ್ನನ್ನು ಮರಕ್ಕೆ ತೂಗಹಾಕಿಸುವನು; ಹಕ್ಕಿಗಳು ಬಂದು ನಿನ್ನ ಮಾಂಸವನ್ನು ತಿಂದುಬಿಡುವವು ಅಂದನು.
Kannada Bible (KNCL) BSI 2016
ಇನ್ನು ಮೂರು ದಿನದೊಳಗೆ ಫರೋಹನು ನಿನ್ನ ಕುತ್ತಿಗೆಗೆ ನೇಣುಹಾಕಿಸುವನು; ಮರಕ್ಕೆ ತೂಗುಹಾಕಿಸುವನು; ಹಕ್ಕಿಗಳು ಬಂದು ನಿನ್ನ ಮಾಂಸವನ್ನು ತಿಂದುಬಿಡುವುವು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ತೆಗೆಸಿ, ನಿನ್ನನ್ನು ಮರದ ಮೇಲೆ ತೂಗು ಹಾಕಿಸುವನು. ಪಕ್ಷಿಗಳು ನಿನ್ನ ಮಾಂಸವನ್ನು ತಿಂದುಬಿಡುವುವು,” ಎಂದನು.