Genesis 40:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಂದು ರಾತ್ರಿ ಆ ಇಬ್ಬರು ಕೈದಿಗಳಿಗೆ ಅಂದರೆ ಭಕ್ಷ್ಯಗಾರನಿಗೂ ಪಾನದಾಯಕನಿಗೂ ಒಂದೊಂದು ಕನಸು ಬಿತ್ತು. ಮತ್ತು ಅವರಿಬ್ಬರ ಕನಸುಗಳು ತಮ್ಮದೇ ಆದ ಅರ್ಥವನ್ನು ಹೊಂದಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐಗುಪ್ತ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ, ಅಡಿಗೆ ಭಟ್ಟನಿಗೂ, ಒಂದೇ ರಾತ್ರಿ ಕನಸುಬಿತ್ತು. ಅವರವರ ಕನಸಿಗೆ ಬೇರೆ ಬೇರೆ ಅರ್ಥವಿತ್ತು.
Kannada BSI Bible 2016
ಅವರಿಬ್ಬರಿಗೂ ಅಂದರೆ ಐಗುಪ್ತದೇಶದ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ ರೊಟ್ಟಿ ಗಾರನಿಗೂ ಒಂದೇ ರಾತ್ರಿ ಕನಸುಬಿತ್ತು. ಅವರವರ ಕನಸಿನ ಪ್ರಕಾರ ಅರ್ಥವಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಅವರು ಕೆಲವು ಕಾಲ ಕಾವಲಲ್ಲಿದ್ದ ಮೇಲೆ ಅವರಿಬ್ಬರಿಗೂ, ಅಂದರೆ ಐಗುಪ್ತದೇಶದ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ ಭಕ್ಷ್ಯಕಾರನಿಗೂ, ಒಂದೇ ರಾತ್ರಿ ಕನಸುಬಿತ್ತು; ಅವರವರ ಕನಸಿಗೆ ಬೇರೆ ಬೇರೆ ಅರ್ಥವಿತ್ತು.
Kannada Bible (KNCL) BSI 2016
ಕೆಲವು ಕಾಲವದ ಮೇಲೆ, ಆ ಇಬ್ಬರು ನೌಕರರಿಗೂ ಅಂದರೆ, ಈಜಿಪ್ಟಿನ ಅರಸ ಸೆರೆಗೆ ಹಾಕಿಸಿದ್ದ ಪಾನಸೇವಕನಿಗೂ ಅಡಿಗೆಭಟ್ಟನಿಗೂ, ಒಂದೇ ರಾತ್ರಿ ಕನಸುಬಿತ್ತು. ಅವರ ಕನಸುಗಳಿಗೆ ಬೇರೆಬೇರೆ ಅರ್ಥವಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಿಬ್ಬರಿಗೂ ಅಂದರೆ, ಈಜಿಪ್ಟ್ ದೇಶದ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ, ರೊಟ್ಟಿಗಾರನಿಗೂ ಒಂದೇ ರಾತ್ರಿ ಕನಸು ಬಿತ್ತು. ಅವರವರ ಕನಸಿಗೆ ಅದರದೇ ಆದ ಅರ್ಥವಿತ್ತು.