Genesis 40:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಇಬ್ಬರು, “ನಾವು ಕಳೆದ ರಾತ್ರಿ ಕನಸನ್ನು ಕಂಡೆವು; ಆದರೆ ನಾವು ಕಂಡ ಕನಸು ನಮಗೆ ಅರ್ಥವಾಗುತ್ತಿಲ್ಲ. ನಮಗೆ ಕನಸುಗಳ ಅರ್ಥವನ್ನು ತಿಳಿಸುವವರಾಗಲಿ ವಿವರಿಸುವವರಾಗಲಿ ಯಾರೂ ಇಲ್ಲ” ಎಂದು ಹೇಳಿದರು. ಯೋಸೇಫನು ಅವರಿಗೆ, “ದೇವರೊಬ್ಬನು ಮಾತ್ರ ಕನಸುಗಳನ್ನು ಅರ್ಥಮಾಡಿಕೊಳ್ಳಬಲ್ಲನು ಮತ್ತು ಕನಸುಗಳ ಅರ್ಥವನ್ನು ಹೇಳಬಲ್ಲನು. ಆದ್ದರಿಂದ ದಯಮಾಡಿ ನಿಮ್ಮ ಕನಸುಗಳನ್ನು ನನಗೆ ತಿಳಿಸಿರಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಅವನಿಗೆ, “ನಮಗೆ ಕನಸುಬಿತ್ತು. ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ” ಎಂದು ಹೇಳಲು ಯೋಸೇಫನು ಅವರಿಗೆ, “ಕನಸುಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ? ದಯಮಾಡಿ ನಿಮ್ಮ ಕನಸನ್ನು ನನಗೆ ತಿಳಿಸಿರಿ” ಎಂದು ಹೇಳಿದನು.
Kannada BSI Bible 2016
ಅವರು ಯೋಸೇಫನಿಗೆ--ನಾವು ಕನಸನ್ನು ಕಂಡಿದ್ದೇವೆ; ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ ಅಂದರು. ಯೋಸೇಫನು ಅವರಿಗೆ ಅರ್ಥ ಹೇಳುವದು ದೇವರದಲ್ಲವೋ ಎಂದು ಹೇಳಿ ಅವುಗಳನ್ನು ನನಗೆ ಹೇಳಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಅವನಿಗೆ - ನಮಗೆ ಸ್ವಪ್ನಬಿತ್ತು; ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ ಎಂದು ಹೇಳಲು ಯೋಸೇಫನು ಅವರಿಗೆ - ಸ್ವಪ್ನಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ; ದಯಮಾಡಿ ನಿಮ್ಮ ಸ್ವಪ್ನವನ್ನು ನನಗೆ ತಿಳಿಸಿರಿ ಎಂದು ಹೇಳಿದನು.
Kannada Bible (KNCL) BSI 2016
ಅವರು, “ನಮಗೆ ಸ್ವಪ್ನಬಿತ್ತು; ಅದರ ಅರ್ಥ ಹೇಳುವವರು ಯಾರೂ ಇಲ್ಲ,” ಎಂದರು. ಜೋಸೆಫನು ಅವರಿಗೆ, “ಸ್ವಪ್ನಗಳ ಅರ್ಥ ದೇವರಿಂದ ದೊರಕಬಹುದಲ್ಲವೆ? ದಯವಿಟ್ಟು ನಿಮ್ಮ ಸ್ವಪ್ನಗಳನ್ನು ನನಗೆ ತಿಳಿಸಿ,” ಎಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಯೋಸೇಫನಿಗೆ, “ನಾವು ಕನಸನ್ನು ಕಂಡಿದ್ದೇವೆ, ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ,” ಎಂದರು. ಯೋಸೇಫನು ಅವರಿಗೆ, “ಅರ್ಥ ಹೇಳುವುದು ದೇವರದಲ್ಲವೋ? ಎಂದು ಹೇಳಿ, ಅವುಗಳನ್ನು ನನಗೆ ಹೇಳಿರಿ,” ಎಂದನು.