Genesis 41:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಫರೋಹನು ಯೋಸೇಫನನ್ನು ಸೆರೆಮನೆಯಿಂದ ಕರೆಸಿದನು. ಯೋಸೇಫನು ಕ್ಷೌರಮಾಡಿಕೊಂಡು ಶುದ್ಧವಾದ ಬಟ್ಟೆಗಳನ್ನು ಹಾಕಿಕೊಂಡು ಹೋಗಿ ಫರೋಹನ ಮುಂದೆ ನಿಂತುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫರೋಹನು ಇದನ್ನು ಕೇಳಿದಾಗ ಯೋಸೇಫನನ್ನು ಕರೆದುಕೊಂಡು ಬರಲು ಹೇಳಿಕಳುಹಿಸಿದನು. ಯೋಸೇಫನನು ಬೇಗನೆ ಸೆರೆಮನೆಯಿಂದ ಬಿಡುಗಡೆ ಮಾಡಿದರು. ಆತನು ಕ್ಷೌರಮಾಡಿಸಿಕೊಂಡು ಬಟ್ಟೆ ಬದಲಾಯಿಸಿಕೊಂಡು ಫರೋಹನ ಸನ್ನಿಧಿಗೆ ಬಂದನು.
Kannada BSI Bible 2016
ಆಗ ಫರೋಹನು ಯೋಸೇಫನನ್ನು ಕರೇ ಕಳುಹಿಸಿದನು. ಅವರು ಅವನನ್ನು ತ್ವರೆಯಾಗಿ ಕಾರಾ ಗೃಹದಿಂದ ಹೊರಗೆ ತಂದರು. ಅವನು ಕ್ಷೌರಮಾಡಿಸಿ ಕೊಂಡವನಾಗಿ ತನ್ನ ವಸ್ತ್ರಗಳನ್ನು ಬದಲಾಯಿಸಿ ಫರೋಹನ ಬಳಿಗೆ ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫರೋಹನು ಇದನ್ನು ಕೇಳಿ ಯೋಸೇಫನನ್ನು ಕರೇ ಕಳುಹಿಸಿದನು. ಯೋಸೇಫನು ಬೇಗನೆ ಸೆರೆಮನೆಯಿಂದ ಬಿಡಿಸಲ್ಪಟ್ಟವನಾಗಿ ಕ್ಷೌರಮಾಡಿಸಿಕೊಂಡು ಬೇರೆ ವಸ್ತ್ರಗಳನ್ನು ಹಾಕಿಕೊಂಡು ಫರೋಹನ ಸನ್ನಿಧಿಗೆ ಬಂದನು.
Kannada Bible (KNCL) BSI 2016
ಇದನ್ನು ಕೇಳಿದ ಫರೋಹನು ಜೋಸೆಫನನ್ನು ಕರೆತರುವಂತೆ ಆಳುಗಳನ್ನು ಕಳಿಸಿದ. ಅವರು ಬಂದು ಅವನನ್ನು ಸೆರೆಯಿಂದ ತ್ವರೆಯಾಗಿ ಬಿಡುಗಡೆ ಮಾಡಿದರು. ಜೋಸೆಫನು ಕ್ಷೌರಮಾಡಿಕೊಂಡು, ಬಟ್ಟೆ ಬದಲಾಯಿಸಿಕೊಂಡು ಫರೋಹನ ಸನ್ನಿಧಿಯಲ್ಲಿ ಹಾಜರಾದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಫರೋಹನು ಯೋಸೇಫನನ್ನು ಕರೆತರುವಂತೆ ಸೇವಕರನ್ನು ಕಳುಹಿಸಿದನು. ಅವರು ಅವನನ್ನು ತ್ವರೆಯಾಗಿ ಕಾರಾಗೃಹದಿಂದ ಹೊರಗೆ ತಂದರು. ಅವನು ಕ್ಷೌರಮಾಡಿಸಿಕೊಂಡು, ವಸ್ತ್ರಗಳನ್ನು ಬದಲಾಯಿಸಿ ಫರೋಹನ ಬಳಿಗೆ ಬಂದನು.