Genesis 41:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಬಡಕಲಾಗಿದ್ದ ಮತ್ತು ಕುರೂಪವಾಗಿದ್ದ ಏಳು ಹಸುಗಳು ನದಿಯೊಳಗಿಂದ ಬಂದು ನಿಂತುಕೊಂಡವು. ಅಂಥಾ ಬಡಕಲು ಹಸುಗಳನ್ನು ನಾನು ಈಜಿಪ್ಟಿನಲ್ಲಿ ಎಂದೂ ನೋಡಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವುಗಳ ಹಿಂದೆ ಅವಲಕ್ಷಣವಾದ ಕೊಬ್ಬಿಲ್ಲದ ಬಡಕಲಾದ ಆಕಳುಗಳು ಏರಿ ಬಂದವು. ಇಂಥ ಆಕಳುಗಳನ್ನು ನಾನು ಐಗುಪ್ತದೇಶದಲ್ಲಿ ಎಲ್ಲಿಯೂ ನೋಡಿರಲಿಲ್ಲ.
Kannada BSI Bible 2016
ಅವುಗಳ ಹಿಂದೆ ಅವಲಕ್ಷಣವಾದ ಕೊಬ್ಬಿಲ್ಲದ ಬಡಕಲಾದ ಬೇರೆ ಏಳು ಹಸುಗಳು ಏರಿಬಂದವು. ಅಂಥಾ ಬಡಕಲಾದ ಹಸುಗಳನ್ನು ನಾನು ಐಗುಪ್ತ ದೇಶದಲ್ಲಿ ಎಲ್ಲಿಯೂ ನೋಡಿದ್ದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವುಗಳ ಹಿಂದೆ ಅವಲಕ್ಷಣವಾದ ಕೊಬ್ಬಿಲ್ಲದ ಬಡವಾದ ಬೇರೆ ಏಳು ಆಕಳುಗಳು ಬಂದವು; ಅಂಥ ಬಡವಾದ ಆಕಳುಗಳನ್ನು ನಾನು ಐಗುಪ್ತದೇಶದಲ್ಲಿ ಎಲ್ಲಿಯೂ ನೋಡಿದ್ದಿಲ್ಲ.
Kannada Bible (KNCL) BSI 2016
ಅವುಗಳ ಹಿಂದೆಯೆ ಬಹಳ ಒಣಕಲಾದ ಹಾಗೂ ಸಣಕಲಾದ, ಬೇರೆ ಏಳು ಬಡಹಸುಗಳು ಬಂದವು. ಅಂಥ ಬಡಹಸುಗಳನ್ನು ನಾನು ಈಜಿಪ್ಟಿನಲ್ಲಿ ಎಲ್ಲೂ ನೋಡಿದ್ದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳ ಹಿಂದೆ ಅವಲಕ್ಷಣವಾದ ಕೊಬ್ಬಿಲ್ಲದ ಬೇರೆ ಏಳು ಬಡಹಸುಗಳು ಏರಿ ಬಂದವು. ಅಂಥ ಬಡ ಹಸುಗಳನ್ನು, ನಾನು ಈಜಿಪ್ಟ್ ದೇಶದಲ್ಲಿ ಎಲ್ಲಿಯೂ ನೋಡಿದ್ದಿಲ್ಲ.