Genesis 41:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಡಕಲಾದ ಮತ್ತು ಕುರೂಪವಾದ ಏಳು ಹಸುಗಳು ಮತ್ತು ಕೆಟ್ಟುಹೋದ ಕಾಳಿನ ಏಳು ತೆನೆಗಳು, ದೇಶಕ್ಕೆ ಬರುವ ಏಳು ವರ್ಷಗಳ ಬರಗಾಲವನ್ನು ಸೂಚಿಸುತ್ತವೆ. ಈ ಏಳು ವರ್ಷಗಳು ಒಳ್ಳೆಯ ವರ್ಷಗಳ ನಂತರ ಬರುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಳ್ಳೆ ಆಕಳುಗಳ ಹಿಂದೆ ಬಂದ ಅವಲಕ್ಷಣವಾದ ಬಡ ಆಕಳುಗಳೂ ಮೂಡಣ ಗಾಳಿಯಿಂದ ಬತ್ತಿ ಹೋಗಿದ್ದ ಆ ಏಳು ತೆನೆಗಳೂ ಬರವುಂಟಾಗುವ ಏಳು ವರ್ಷಗಳನ್ನು ಸೂಚಿಸುತ್ತವೆ.
Kannada BSI Bible 2016
ಅವುಗಳ ತರುವಾಯ ಏರಿಬಂದ ಬಡಕಲಾದ ಕೆಟ್ಟ ಏಳು ಹಸುಗಳು ಏಳು ವರುಷಗಳು. ಮೂಡಣ ಗಾಳಿಯಿಂದ ಬತ್ತಿಹೋದ ಏಳು ಬಡಕಲಾದ ತೆನೆಗಳು ಬರವು ಇರುವ ಏಳು ವರುಷಗಳು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಳ್ಳೇ ಆಕಳುಗಳ ಹಿಂದೆ ಬಂದ ಅವಲಕ್ಷಣವಾದ ಆ ಬಡ ಆಕಳುಗಳೂ ಮೂಡಣ ಗಾಳಿಯಿಂದ ಕೆಟ್ಟುಹೋಗಿದ್ದ ಆ ಏಳು ಕಾಳಿಲ್ಲದ ತೆನೆಗಳೂ ಬರವುಂಟಾಗುವ ಏಳು ವರುಷಗಳನ್ನು ಸೂಚಿಸುತ್ತವೆ.
Kannada Bible (KNCL) BSI 2016
ಒಳ್ಳೆಯ ಹಸುಗಳ ಹಿಂದೆ ಬಂದ ಒಣಕಲಾಗಿದ್ದ ಆ ಏಳು ಬಡಹಸುಗಳು ಮತ್ತು ಮೂಡಣ ಗಾಳಿಯಿಂದ ಕೆಟ್ಟುಹೋಗಿದ್ದ ಆ ಏಳು ಕಾಳಿಲ್ಲದ ತೆನೆಗಳು ಬರವುಂಟಾಗುವ ಏಳು ವರ್ಷಗಳನ್ನು ಸೂಚಿಸುತ್ತವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳ ತರುವಾಯ ಏರಿ ಬಂದ ಬಡಕಲಾದ ಕೆಟ್ಟ ಏಳು ಹಸುಗಳು ಮತ್ತು ಪೂರ್ವದಿಕ್ಕಿನ ಗಾಳಿಯಿಂದ ಒಣಗಿ ಬತ್ತಿ ಹೋಗಿದ್ದ ಏಳು ತೆನೆಗಳು, ಬರಲಿರುವ ಏಳು ವರ್ಷಗಳು.