Genesis 41:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಬಡಕಲಾಗಿದ್ದ ಮತ್ತು ಕುರೂಪವಾಗಿದ್ದ ಏಳು ಹಸುಗಳು ನದಿಯೊಳಗಿಂದ ಬಂದು ಲಕ್ಷಣವಾಗಿದ್ದ ಏಳು ಹಸುಗಳ ಪಕ್ಕದಲ್ಲಿ ನಿಂತುಕೊಂಡವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವುಗಳ ಹಿಂದೆ ಅವಲಕ್ಷಣವಾದ ಹಾಗೂ ಬಡಕಲಾದ ಏಳು ಆಕಳುಗಳು ನೈಲ್ ನದಿಯೊಳಗಿಂದ ಬಂದು ಮೊದಲು ಕಾಣಿಸಿದ ಆಕಳುಗಳ ಹತ್ತಿರ ನದಿಯ ತೀರದಲ್ಲಿ ನಿಂತವು.
Kannada BSI Bible 2016
ಇಗೋ, ಅವಲಕ್ಷಣವಾದ ಮತ್ತು ಬಡಕಲಾದ ಬೇರೆ ಏಳು ಹಸುಗಳು ಅವುಗಳ ಹಿಂದೆ ನದಿಯೊಳಗಿಂದ ಏರಿಬಂದು ಹಸುಗಳ ಹತ್ತಿರ ನದೀ ತೀರದಲ್ಲಿ ನಿಂತಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವುಗಳ ಹಿಂದೆ ಮೈಯೊಣಗಿ ಬಡವಾದ ಏಳು ಆಕಳುಗಳು ನದಿಯೊಳಗಣಿಂದ ಬಂದು ಮೊದಲು ಕಾಣಿಸಿದ ಆಕಳುಗಳ ಹತ್ತರ ನದೀತೀರದಲ್ಲಿ ನಿಂತವು.
Kannada Bible (KNCL) BSI 2016
ಅವುಗಳ ಹಿಂದೆಯೇ ಒಣಕಲಾದ ಏಳು ಬಡ ಹಸುಗಳು ನದಿಯೊಳಗಿಂದ ಬಂದು ಮೊದಲು ಕಾಣಿಸಿದ ಹಸುಗಳ ಹತ್ತಿರ ನದಿಯ ತೀರದಲ್ಲೇ ನಿಂತವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಲಕ್ಷಣವಾದ ಬೇರೆ ಏಳು ಬಡಹಸುಗಳು ಅವುಗಳ ಹಿಂದೆ ನದಿಯೊಳಗಿಂದ ಏರಿಬಂದು, ಆ ಹಸುಗಳ ಹತ್ತಿರ ನೈಲ್ ನದಿ ತೀರದಲ್ಲಿ ನಿಂತಿದ್ದವು.