Genesis 41:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಆ ಏಳು ವರ್ಷಗಳಾದ ಮೇಲೆ ದೇಶದಲ್ಲೆಲ್ಲಾ ಏಳು ವರ್ಷಗಳವರೆಗೆ ಬರಗಾಲವಿರುವುದು. ಆಗ ಈಜಿಪ್ಟಿನ ಜನರು ತಾವು ಮೊದಲು ಬೆಳೆದ ಆಹಾರವನ್ನೆಲ್ಲಾ ಮರೆತುಬಿಡುವರು. ಈ ಕ್ಷಾಮವು ದೇಶವನ್ನು ನಾಶಮಾಡುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವುಗಳ ತರುವಾಯ ಏಳು ದುರ್ಭಿಕ್ಷ ವರ್ಷಗಳೂ ಬರುವವು. ಆಗ ಐಗುಪ್ತದವರು ಮೊದಲಿದ್ದ ಸುಭಿಕ್ಷವನ್ನು ಮರೆತುಬಿಡುವರು. ಆ ಬರದಿಂದ ದೇಶವು ಹಾಳಾಗಿ ಹೋಗುವುದು.
Kannada BSI Bible 2016
ಅವುಗಳ ಹಿಂದೆ ಏಳು ವರುಷಗಳ ಬರಗಾಲ ಬರುತ್ತವೆ. ಆಗ ಐಗುಪ್ತದಲ್ಲಿದ್ದ ಸುಭಿಕ್ಷೆಯು ಮರೆಯುವದು. ಇದಲ್ಲದೆ ಬರಗಾಲವು ದೇಶವನ್ನು ನಾಶಮಾಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಳು ಸುಭಿಕ್ಷ ವರುಷಗಳೂ ಅವುಗಳ ತರುವಾಯ ಏಳು ದುರ್ಭಿಕ್ಷವರುಷಗಳೂ ಬರುವವು. ಆಗ ಐಗುಪ್ತದೇಶದವರು ಮೊದಲಿದ್ದ ಸುಭಿಕ್ಷವನ್ನು ಮರೆತುಬಿಡುವರು; ಆ ಬರದಿಂದ ದೇಶವು ಹಾಳಾಗಿ ಹೋಗುವದು.
Kannada Bible (KNCL) BSI 2016
ತರುವಾಯ ಏಳು ದುರ್ಭಿಕ್ಷ ವರ್ಷಗಳೂ ಬರುವುವು. ಆಗ ಈಜಿಪ್ಟ್ ದೇಶದ ಅವರು ಮೊದಲಿದ್ದ ಆ ಸುಭಿಕ್ಷವನ್ನು ಮರೆತುಬಿಡುವರು; ಆ ಬರದಿಂದ ದೇಶವು ಹಾಳಾಗಿಹೋಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವುಗಳ ಹಿಂದೆ ಏಳು ವರ್ಷಗಳ ಬರಗಾಲ ಬರುತ್ತವೆ. ಆಗ ಈಜಿಪ್ಟಿನಲ್ಲಿದ್ದ ಸುಭಿಕ್ಷವು ಮರೆಯುವಂತಾಗುವುದು. ಇದಲ್ಲದೆ ಬರಗಾಲವು ದೇಶವನ್ನು ನಾಶಮಾಡುವುದು.