Genesis 41:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕುರೂಪವಾಗಿದ್ದ ಏಳು ಹಸುಗಳು ಲಕ್ಷಣವಾಗಿದ್ದ ಏಳು ಹಸುಗಳನ್ನು ತಿಂದುಬಿಟ್ಟವು. ಆಗ ಫರೋಹನಿಗೆ ಎಚ್ಚರವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವಲಕ್ಷಣವಾದ ಈ ಬಡ ಏಳು ಆಕಳುಗಳು ಲಕ್ಷಣವಾದ ಆ ಕೊಬ್ಬಿದ ಆಕಳುಗಳನ್ನು ತಿಂದು ಬಿಟ್ಟವು. ಆಗ ಫರೋಹನಿಗೆ ಎಚ್ಚರವಾಯಿತು.
Kannada BSI Bible 2016
ಅವಲಕ್ಷಣವಾದ ಮತ್ತು ಬಡಕಲಾದ ಹಸುಗಳು ಕೊಬ್ಬಿದ ಮತ್ತು ಲಕ್ಷಣವಾದ ಏಳು ಹಸುಗಳನ್ನು ತಿಂದು ಬಿಟ್ಟವು. ಆಗ ಫರೋಹನು ಎಚ್ಚತ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೈಯೊಣಗಿದ ಈ ಬಡ ಆಕಳುಗಳು ಲಕ್ಷಣವಾದ ಆ ಕೊಬ್ಬಿದ ಆಕಳುಗಳನ್ನು ತಿಂದುಬಿಟ್ಟವು. ಹೀಗೆ ಕಾಣಿಸುವಷ್ಟರಲ್ಲಿ ಫರೋಹನಿಗೆ ಎಚ್ಚರವಾಯಿತು.
Kannada Bible (KNCL) BSI 2016
ಒಣಕಲಾದ ಈ ಬಡ ಹಸುಗಳು ಅಚ್ಚುಕಟ್ಟಾದ ಆ ಕೊಬ್ಬಿದ ಹಸುಗಳನ್ನು ತಿಂದುಬಿಟ್ಟವು. ಅಷ್ಟರಲ್ಲಿ ಫರೋಹನಿಗೆ ಎಚ್ಚರವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಅವಲಕ್ಷಣವಾದ ಬಡಹಸುಗಳು, ಕೊಬ್ಬಿದ ಮತ್ತು ಲಕ್ಷಣವಾದ ಏಳು ಹಸುಗಳನ್ನು ತಿಂದುಬಿಟ್ಟವು. ಆಗ ಫರೋಹನು ಎಚ್ಚೆತ್ತನು.