Genesis 41:43 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಫರೋಹನು ಯೋಸೇಫನಿಗೆ ಎರಡನೆಯ ರಾಜರಥವನ್ನು ಸಂಚಾರಕ್ಕಾಗಿ ಕೊಟ್ಟನು. ವಿಶೇಷಕಾವಲುಗಾರರು ಅವನ ರಥದ ಮುಂದೆ ನಡೆದುಹೋಗುತ್ತಾ “ಪ್ರಜೆಗಳೇ, ಯೋಸೇಫನಿಗೆ ತಲೆಬಾಗಿ ನಮಸ್ಕರಿಸಿರಿ” ಎಂದು ಪ್ರಕಟಿಸಿದರು. ಹೀಗೆ ಯೋಸೇಫನು ಈಜಿಪ್ಟಿಗೆಲ್ಲಾ ರಾಜ್ಯಪಾಲನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತನಗಿದ್ದ ಎರಡನೇ ರಥದಲ್ಲಿ ಅವನನ್ನು ಕುಳ್ಳಿರಿಸಿ, “ಅವನ ಮುಂದೆ ಅಡ್ಡ ಬೀಳಿರಿ” ಎಂದು ಪ್ರಕಟಣೆ ಹೊರಡಿಸಿ ಅವನನ್ನು ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ಇಟ್ಟನು.
Kannada BSI Bible 2016
ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂರಿಸಿ ದಾಗ--ಅವನ ಮುಂದೆ ಮೊಣಕಾಲೂರಿರಿ ಎಂದು ಜನರು ಕೂಗಿದರು. ಹೀಗೆ ಅವನನ್ನು ಐಗುಪ್ತ ದೇಶದ ಮೇಲೆಲ್ಲಾ ಆಳುವವನನ್ನಾಗಿ ನೇಮಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತನಗಿದ್ದ ಎರಡನೆಯ ರಥದಲ್ಲಿ ಕುಳ್ಳಿರಿಸಿ ಅವನ ಮುಂದೆ ಅಡ್ಡಬೀಳಿರಿ ಎಂದು ಪ್ರಕಟಣೆಮಾಡಿಸಿ ಅವನನ್ನು ಐಗುಪ್ತದೇಶಕ್ಕೆ ಸರ್ವಾಧಿಕಾರಿಯನ್ನಾಗಿ ಇಟ್ಟನು.
Kannada Bible (KNCL) BSI 2016
ತನಗಿದ್ದ ಎರಡನೆಯ ರಥದಲ್ಲಿ ಕುಳ್ಳಿರಿಸಿ ಅವನ ಮುಂದೆ, “ಈತನಿಗೆ ಅಡ್ಡಬೀಳಿ,” ಎಂದು ಪ್ರಕಟನೆ ಮಾಡಿಸಿದನು. ಹೀಗೆ ಅವನನ್ನು ಈಜಿಪ್ಟ್ ದೇಶಕ್ಕೆ ಮುಖ್ಯಮಂತ್ರಿಯನ್ನಾಗಿ ನೇಮಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂಡಿಸಿದಾಗ, “ಈತನನ್ನು ನಮಸ್ಕರಿಸಿ ದಾರಿಮಾಡಿರಿ,” ಎಂದು ಪ್ರಕಟಿಸಿದನು. ಹೀಗೆ ಅವನನ್ನು ಈಜಿಪ್ಟ್ ದೇಶವನ್ನೆಲ್ಲಾ ಆಳುವವನನ್ನಾಗಿ ನೇಮಿಸಿದನು.