Genesis 41:44 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಫರೋಹನು ಅವನಿಗೆ, “ನಾನು ರಾಜ ಫರೋಹ. ಆದ್ದರಿಂದ ನನಗೆ ಇಷ್ಟವಾದದ್ದನ್ನು ಮಾಡುವೆನು. ಆದರೆ ನಿನ್ನ ಅಪ್ಪಣೆಯಿಲ್ಲದೆ ಈಜಿಪ್ಟಿನ ಬೇರೆ ಯಾರೂ ಕೈಯೆತ್ತಲೂ ಸಾಧ್ಯವಿಲ್ಲ, ಕಾಲನ್ನು ಚಲಿಸಲೂ ಸಾಧ್ಯವಿಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲದೆ ಫರೋಹನು ಯೋಸೇಫನಿಗೆ ಹೇಳಿದ್ದೇನೆಂದರೆ, “ನಾನು ಫರೋಹನು. ನಿನ್ನ ಅಪ್ಪಣೆಯಿಲ್ಲದೆ ಐಗುಪ್ತ ದೇಶದಲ್ಲೆಲ್ಲಾ ಒಬ್ಬನೂ ಕೈಯನ್ನಾಗಲಿ, ಕಾಲನ್ನಾಗಲಿ ಕದಲಿಸಬಾರದು” ಎಂದು ಹೇಳಿದನು.
Kannada BSI Bible 2016
ಇದಲ್ಲದೆ ಫರೋಹನು ಯೋಸೇಫನಿಗೆ--ನಾನು ಫರೋಹನು, ನಿನ್ನ ಅಪ್ಪಣೆಯಿಲ್ಲದೆ ಐಗುಪ್ತದೇಶ ದಲ್ಲೆಲ್ಲಾ ಯಾವನೂ ತನ್ನ ಕೈಯನ್ನಾಗಲಿ ಕಾಲ ನ್ನಾಗಲಿ ಎತ್ತಬಾರದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನೂ ಫರೋಹನು ಅವನಿಗೆ - ನಾನು ಫರೋಹನು; ನಿನ್ನ ಅಪ್ಪಣೆಯಿಲ್ಲದೆ ಐಗುಪ್ತದೇಶದಲ್ಲೆಲ್ಲಾ ಒಬ್ಬನೂ ಕೈಯನ್ನಾಗಲಿ ಕಾಲನ್ನಾಗಲಿ ಕದಲಿಸಕೂಡದು ಎಂದು ಹೇಳಿದನು.
Kannada Bible (KNCL) BSI 2016
ಅಷ್ಟು ಮಾತ್ರವಲ್ಲ, ಫರೋಹನು ಅವನಿಗೆ, “ಫರೋಹನಾದ ನಾನು ಹೇಳುತ್ತಿದ್ದೇನೆ: ನಿನ್ನ ಅಪ್ಪಣೆಯಿಲ್ಲದೆ ಇಡೀ ಈಜಿಪ್ಟ್ ದೇಶದಲ್ಲಿ ಯಾರೂ ಏನನ್ನೂ ಮಾಡಕೂಡದು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಫರೋಹನು ಯೋಸೇಫನಿಗೆ, “ನಾನು ಫರೋಹನು, ನಿನ್ನ ಅಪ್ಪಣೆಯಿಲ್ಲದೆ ಈಜಿಪ್ಟ್ ದೇಶದಲ್ಲೆಲ್ಲಾ ಯಾವನೂ ತನ್ನ ಕೈಯನ್ನಾಗಲಿ, ಕಾಲನ್ನಾಗಲಿ ಎತ್ತಬಾರದು,” ಎಂದನು.