Genesis 41:45 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಫರೋಹನು ಯೋಸೇಫನಿಗೆ, ಸಾಫ್ನತ್ಪನ್ನೇಹ ಎಂಬ ಹೆಸರನ್ನು ಕೊಟ್ಟನು. ಇದಲ್ಲದೆ ಫರೋಹನು ಯೋಸೇಫನಿಗೆ ಆಸನತ್ ಎಂಬಾಕೆಯನ್ನು ಮದುವೆ ಮಾಡಿಸಿದನು. ಆಕೆ ಓನ್ ನಗರದ ಆಚಾರ್ಯನಾಗಿದ್ದ ಫೋಟೀಫರನ ಮಗಳು. ಹೀಗೆ ಯೋಸೇಫನು ಈಜಿಪ್ಟ್ ದೇಶಕ್ಕೆಲ್ಲಾ ರಾಜ್ಯಪಾಲನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಫರೋಹನು ಯೋಸೇಫನಿಗೆ “ಸಾಫ್ನತ್ಪನ್ನೇಹ” ಎಂದು ಹೆಸರಿಟ್ಟನು. ತರುವಾಯ ಓನನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಮದುವೆಮಾಡಿಸಿದನು. ಯೋಸೇಫನು ಐಗುಪ್ತದೇಶದ ಮೇಲೆ ಅಧಿಕಾರಿಯಾಗಿ ದೇಶದಲ್ಲೆಲ್ಲಾ ಸಂಚರಿಸಿದನು.
Kannada BSI Bible 2016
ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್‌ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ಆಗ ಯೋಸೇಫನು ಐಗುಪ್ತದೇಶದಲ್ಲೆಲ್ಲಾ ಹೊರಟು ಸಂಚರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟು ಓನ್ ಎಂಬ ಗುರುಪೀಠದ ಆಚಾರ್ಯನಾಗಿದ್ದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಮದುವೆ ಮಾಡಿಸಿದನು. ಯೋಸೇಫನು ಐಗುಪ್ತದೇಶದ ಮೇಲೆ ಅಧಿಕಾರಿಯಾಗಿ ಹೊರಟನು.
Kannada Bible (KNCL) BSI 2016
ಬಳಿಕ ಫರೋಹನು ಜೋಸೆಫನಿಗೆ ‘ಸಾಪ್ನತ್ಪನ್ನೇಹ’ ಎಂಬ ಹೊಸ ಹೆಸರಿಟ್ಟನು; ಓನ್ ಎಂಬ ಗುರುಪೀಠದ ಆಚಾರ್ಯನಾಗಿದ್ದ ಪೋಟೀಫೆರನ ಮಗಳು ಆಸನತ್ ಎಂಬಾಕೆಯನ್ನು ಅವನಿಗೆ ಮದುವೆಮಾಡಿಸಿದನು. ತರುವಾಯ ಜೋಸೆಫನು ಈಜಿಪ್ಟ್ ದೇಶಸಂಚಾರ ಹೊರಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ತರುವಾಯ ಯೋಸೇಫನು ಈಜಿಪ್ಟ್ ದೇಶದಲ್ಲೆಲ್ಲಾ ಸಂಚರಿಸಿದನು.