Genesis 41:48 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಜಿಪ್ಟಿನಲ್ಲಿ ಯೋಸೇಫನು ಆ ಏಳು ವರ್ಷಗಳ ಕಾಲದಲ್ಲಿ ಆಹಾರವನ್ನು ಸಂಗ್ರಹಿಸಿ ನಗರಗಳ ಉಗ್ರಾಣಗಳಲ್ಲಿಟ್ಟನು. ಪ್ರತಿಯೊಂದು ನಗರದ ಸುತ್ತುಮುತ್ತಲಿನ ಹೊಲಗಳಲ್ಲಿ ಬೆಳೆದ ದವಸಧಾನ್ಯವನ್ನು ಆಯಾ ನಗರಗಳಲ್ಲಿ ಕೂಡಿಸಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐಗುಪ್ತದೇಶದಲ್ಲಿ ಸುಭಿಕ್ಷವಾದ ಆ ಏಳು ವರ್ಷಗಳ ಬೆಳೆಯನ್ನು ಯೋಸೇಫನು ಕೂಡಿಸಿ ಪಟ್ಟಣಗಳಲ್ಲಿ ಶೇಖರಿಸಿ ಇಡುವ ವ್ಯವಸ್ಥೆಮಾಡಿದನು. ಒಂದೊಂದು ಪಟ್ಟಣದ ಸುತ್ತಲೂ ಹೊಲಗಳ ಬೆಳೆಯನ್ನು ಆಯಾ ಪಟ್ಟಣದಲ್ಲಿಯೇ ಶೇಖರಿಸಿದ್ದನು.
Kannada BSI Bible 2016
ಹೀಗಿರಲಾಗಿ ಅವನು ಐಗುಪ್ತದೇಶದಲ್ಲಿದ್ದ ಆ ಏಳು ವರುಷಗಳ ಆಹಾರವನ್ನೆಲ್ಲಾ ಕೂಡಿಸಿ ಪಟ್ಟಣ ಗಳಲ್ಲಿ ಇಟ್ಟನು. ಒಂದೊಂದು ಪಟ್ಟಣದ ಸುತ್ತಲಿರುವ ಬೆಳೆಯನ್ನು ಆಯಾ ಪಟ್ಟಣದಲ್ಲಿ ಕೂಡಿಸಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐಗುಪ್ತದೇಶದಲ್ಲಿ ಸುಭಿಕ್ಷವಾದ ಆ ಏಳು ವರುಷಗಳ ಬೆಳೆಯನ್ನು ಯೋಸೇಫನು ಕೂಡಿಸಿ ಪಟ್ಟಣಗಳಲ್ಲಿ ಇರಿಸಿದನು; ಒಂದೊಂದು ಪಟ್ಟಣದ ಸುತ್ತಲಿದ್ದ ಹೊಲಗಳ ಬೆಳೆಯನ್ನು ಆಯಾ ಪಟ್ಟಣದಲ್ಲಿಯೇ ಕೂಡಿಸಿಟ್ಟನು.
Kannada Bible (KNCL) BSI 2016
ಆ ಏಳು ವರ್ಷದ ಬೆಳೆಯನ್ನು ಜೋಸೆಫನು ಶೇಖರಿಸಿ ಪಟ್ಟಣಗಳಲ್ಲಿ ಇಟ್ಟನು. ಆಯಾ ಪಟ್ಟಣದ ಸುತ್ತಲಿದ್ದ ಹೊಲಗಳ ಬೆಳೆಯನ್ನು ಆಯಾ ಪಟ್ಟಣದಲ್ಲೇ ಶೇಖರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರಲಾಗಿ ಅವನು ಈಜಿಪ್ಟ್ ದೇಶದಲ್ಲಿದ್ದ ಆ ಏಳು ವರ್ಷಗಳ ಆಹಾರವನ್ನೆಲ್ಲಾ ಕೂಡಿಸಿ, ಪಟ್ಟಣಗಳಲ್ಲಿ ಇಟ್ಟನು. ಒಂದೊಂದು ಪಟ್ಟಣದ ಸುತ್ತಲಿರುವ ಬೆಳೆಯನ್ನು ಆಯಾ ಪಟ್ಟಣದಲ್ಲಿ ಕೂಡಿಸಿಟ್ಟನು.