Genesis 41:50 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಸೇಫನ ಹೆಂಡತಿ ಆಸನತ್ ಓನ್ ನಗರದಲ್ಲಿ ಆಚಾರ್ಯನಾಗಿದ್ದ ಪೋಟೀಫೆರನ ಮಗಳು. ಬರಗಾಲದ ಮೊದಲನೆಯ ವರ್ಷ ಬರುವುದಕ್ಕಿಂತ ಮೊದಲೇ ಯೋಸೇಫನಿಗೆ ಆಸನತಳಲ್ಲಿ ಇಬ್ಬರು ಗಂಡುಮಕ್ಕಳು ಹುಟ್ಟಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬರಗಾಲ ಬರುವುದಕ್ಕಿಂತ ಮೊದಲು ಯೋಸೇಫನಿಗೆ ಇಬ್ಬರು ಗಂಡು ಮಕ್ಕಳು ಹುಟ್ಟಿದರು. ಇವರು ಓನ್ ಪಟ್ಟಣದ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದರು.
Kannada BSI Bible 2016
ಇದಲ್ಲದೆ ಬರಗಾಲದ ವರುಷಗಳು ಬರುವದಕ್ಕೆ ಮುಂಚೆ ಯೋಸೇಫನಿಗೆ ಇಬ್ಬರು ಕುಮಾರರು ಹುಟ್ಟಿದರು. ಓನಿನ ಯಾಜಕನಾದ ಪೋಟೀಫೆರನ ಮಗಳಾಗಿದ್ದ ಆಸನತ್‌ ಅವರನ್ನು ಯೋಸೇಫನಿಗೆ ಹೆತ್ತಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬರಗಾಲ ಬರುವದಕ್ಕಿಂತ ಮುಂಚೆ ಯೋಸೇಫನಿಗೆ ಇಬ್ಬರು ಗಂಡು ಮಕ್ಕಳು ಹುಟ್ಟಿದರು. ಇವರು ಓನ್ ಪಟ್ಟಣದ ಆಚಾರ್ಯನಾಗಿದ್ದ ಪೋಟೀಫೆರನ ಮಗಳಾದ ಆಸನತೆಂಬಾಕೆಯಲ್ಲಿ ಅವನಿಗೆ ಹುಟ್ಟಿದರು.
Kannada Bible (KNCL) BSI 2016
ಬರಗಾಲ ಬರುವುದಕ್ಕೆ ಮುಂಚೆ ಜೋಸೆಫನಿಗೆ ಇಬ್ಬರು ಗಂಡು ಮಕ್ಕಳು ಹುಟ್ಟಿದರು. ಅವರ ತಾಯಿ ಓನ್ ಪಟ್ಟಣದ ಆಚಾರ್ಯನಾಗಿದ್ದ ಪೋಟೀಫೆರನ ಮಗಳಾದ ಆಸನತ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಬರಗಾಲದ ವರ್ಷಗಳು ಬರುವುದಕ್ಕೆ ಮುಂಚೆ, ಯೋಸೇಫನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್, ಅವಳನ್ನು ಯೋಸೇಫನಿಗೆ ಹೆತ್ತಳು.