Genesis 41:51 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೊದಲನೆಯ ಮಗನು ಹುಟ್ಟಿದಾಗ, “ನನ್ನ ಎಲ್ಲಾ ಕಷ್ಟಗಳನ್ನೂ ನನ್ನ ತಂದೆಯ ಮನೆಯವರನ್ನೂ ಮರೆತುಬಿಡುವಂತೆ ದೇವರು ನನಗೆ ಸಹಾಯ ಮಾಡಿದನು” ಎಂದು ಹೇಳಿ ಯೋಸೇಫನು ಆ ಮಗುವಿಗೆ, ‘ಮನಸ್ಸೆ’ ಎಂದು ಹೆಸರಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೊಚ್ಚಲು ಮಗನು ಹುಟ್ಟಿದಾಗ ಯೋಸೇಫನು, “ನಾನು ನನ್ನ ಎಲ್ಲಾ ಕಷ್ಟವನ್ನು, ತಂದೆಯ ಮನೆಯವರನ್ನೂ ಮರೆತುಬಿಡುವಂತೆ ದೇವರು ಮಾಡಿದನು” ಎಂದು ಹೇಳಿ ಅವನಿಗೆ “ ಮನಸ್ಸೆ” ಎಂದು ಹೆಸರಿಟ್ಟನು.
Kannada BSI Bible 2016
ಚೊಚ್ಚಲ ಮಗನಿಗೆ ಯೋಸೇಫನು ಮನಸ್ಸೆ ಎಂದು ಹೆಸರಿಟ್ಟನು. ಯಾಕಂದರೆ ಅವನು--ದೇವರು ನನ್ನ ಕಷ್ಟವನ್ನು ಮತ್ತು ನನ್ನ ತಂದೆಯ ಮನೆಯನ್ನೆಲ್ಲಾ ಮರೆತುಬಿಡುವಂತೆ ಮಾಡಿದನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಚೊಚ್ಚಲುಮಗನು ಹುಟ್ಟಿದಾಗ ಯೋಸೇಫನು - ನಾನು ನನ್ನ ಎಲ್ಲಾ ಕಷ್ಟವನ್ನೂ ತಂದೆಯ ಮನೆಯವರನ್ನೂ ಮರೆತುಬಿಡುವಂತೆ ದೇವರು ಮಾಡಿದ್ದಾನಲ್ಲಾ ಎಂದು ಹೇಳಿ ಅವನಿಗೆ ಮನಸ್ಸೆ ಎಂದು ಹೆಸರಿಟ್ಟನು.
Kannada Bible (KNCL) BSI 2016
ಜೇಷ್ಠಮಗ ಹುಟ್ಟಿದಾಗ ಜೋಸೆಫನು, “ನಾನು ನನ್ನ ಕಷ್ಟದುಃಖವನ್ನೂ ತಂದೆಯ ಮನೆಯವರನ್ನೂ ಮರೆಯುವಂತೆ ದೇವರು ಮಾಡಿದ್ದಾರಲ್ಲಾ!” ಎಂದುಕೊಂಡು ಆ ಮಗುವಿಗೆ, ‘ಮನಸ್ಸೆ’ ಎಂದು ಹೆಸರಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜೇಷ್ಠಪುತ್ರನಿಗೆ ಯೋಸೇಫನು ಮನಸ್ಸೆ ಎಂದು ಹೆಸರಿಟ್ಟನು. ಏಕೆಂದರೆ ಅವನು, “ದೇವರು ನನ್ನ ಕಷ್ಟವನ್ನು ಮತ್ತು ನನ್ನ ತಂದೆಯ ಮನೆಯನ್ನು ಮರೆತುಬಿಡುವಂತೆ ಮಾಡಿದರು,” ಎಂದನು.