Genesis 41:52 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎರಡನೆ ಮಗನು ಹುಟ್ಟಿದಾಗ, “ನನಗೆ ಕಷ್ಟ ಬಂದ ದೇಶದಲ್ಲೇ ದೇವರು ನನ್ನನ್ನು ಅಭಿವೃದ್ಧಿಪಡಿಸಿದನು” ಎಂದು ಹೇಳಿ, ಆ ಮಗುವಿಗೆ, ‘ಎಫ್ರಾಯೀಮ್’ ಎಂದು ಹೆಸರಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎರಡನೆಯ ಮಗನು ಹುಟ್ಟಿದಾಗ, “ನನಗೆ ಸಂಕಟ ಬಂದ ದೇಶದಲ್ಲೇ ದೇವರು ಅಭಿವೃದ್ಧಿಯನ್ನು ದಯಪಾಲಿಸಿದ್ದಾನೆ” ಎಂದು ಹೇಳಿ ಆ ಮಗನಿಗೆ “ ಎಫ್ರಾಯೀಮ್” ಎಂದು ಹೆಸರಿಟ್ಟನು.
Kannada BSI Bible 2016
ಅವನು ತನ್ನ ಎರಡನೆಯ ಮಗನಿಗೆ ಎಫ್ರಾಯಾಮ್‌ ಎಂದು ಹೆಸರಿಟ್ಟನು: ಯಾಕಂದರೆ ನಾನು ಬಾಧೆಯನ್ನನುಭವಿಸಿದ ದೇಶದಲ್ಲಿ ಫಲಭರಿತ ನಾಗುವಂತೆ ದೇವರು ಮಾಡಿದ್ದಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎರಡನೆಯ ಮಗನು ಹುಟ್ಟಿದಾಗ ಅವನು - ನನಗೆ ಸಂಕಟ ಬಂದ ದೇಶದಲ್ಲೇ ದೇವರು ಅಭಿವೃದ್ಧಿಯನ್ನು ದಯಪಾಲಿಸಿದ್ದಾನೆಂದು ಹೇಳಿ ಆ ಮಗನಿಗೆ ಎಫ್ರಾಯೀಮ್ ಎಂದು ಹೆಸರಿಟ್ಟನು.
Kannada Bible (KNCL) BSI 2016
ಎರಡನೆಯ ಮಗನು ಹುಟ್ಟಿದಾಗ, ಯಾವ ದೇಶದಲ್ಲಿ ನನಗೆ ಸಂಕಷ್ಟವಿತ್ತೋ ಆ ದೇಶದಲ್ಲಿ ದೇವರು ನನಗೆ ಸಮೃದ್ಧಿಯನ್ನು ದಯಪಾಲಿಸಿದ್ದಾರೆ!” ಎಂದು ಆ ಮಗನಿಗೆ ‘ಎಫ್ರಾಯೀಮ್’ ಎಂದು ನಾಮಕರಣ ಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ತನ್ನ ಎರಡನೆಯ ಮಗನಿಗೆ ಎಫ್ರಾಯೀಮ್ ಎಂದು ಹೆಸರಿಟ್ಟನು. “ನಾನು ಬಾಧೆಯನ್ನನುಭವಿಸಿದ ದೇಶ ಫಲಭರಿತವಾಗುವಂತೆ ದೇವರು ಮಾಡಿದ್ದಾರೆ,” ಎಂದನು.