Genesis 41:55 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬರಗಾಲವು ಪ್ರಾರಂಭವಾದಾಗ ಜನರು ಆಹಾರಕ್ಕಾಗಿ ಫರೋಹನನ್ನು ಬೇಡಿಕೊಂಡರು. ಫರೋಹನು ಈಜಿಪ್ಟಿನ ಜನರಿಗೆ, “ಯೋಸೇಫನನ್ನು ಕೇಳಿರಿ; ಅವನು ಹೇಳಿದಂತೆ ಮಾಡಿರಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐಗುಪ್ತ ದೇಶದಲ್ಲಿ ಬರ ಬಂದಾಗ ಪ್ರಜೆಗಳು ಆಹಾರ ಬೇಕೆಂದು ಫರೋಹನಿಗೆ ಮೊರೆಯಿಟ್ಟರು. ಅವನು ಅವರಿಗೆ, “ಯೋಸೇಫನ ಬಳಿಗೆ ಹೋಗಿರಿ, ಅವನು ಹೇಳಿದಂತೆ ಮಾಡಿರಿ” ಎಂದು ಹೇಳಿದನು.
Kannada BSI Bible 2016
ಐಗುಪ್ತದವರೆಲ್ಲಾ ಹಸಿದು ಜನರು ಆಹಾರ ಕ್ಕಾಗಿ ಫರೋಹನ ಬಳಿಗೆ ಹೋಗಿ ಕೂಗಿಕೊಂಡಾಗ ಫರೋಹನು ಎಲ್ಲಾ ಐಗುಪ್ತದವರಿಗೆ--ಯೋಸೇಫನ ಬಳಿಗೆ ಹೋಗಿರಿ; ಅವನು ನಿಮಗೆ ಹೇಳುವದನ್ನು ಮಾಡಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐಗುಪ್ತದೇಶಕ್ಕೆಲ್ಲಾ ಬರಬಂದಾಗ ಪ್ರಜೆಗಳು ಆಹಾರಬೇಕೆಂದು ಫರೋಹನಿಗೆ ಮೊರೆಯಿಟ್ಟುಕೊಂಡರು. ಅವನು ಅವರಿಗೆ - ಯೋಸೇಫನ ಬಳಿಗೆ ಹೋಗಿರಿ, ಅವನ ಮಾತಿನ ಮೇರೆಗೆ ಮಾಡಿರಿ ಎಂದು ಹೇಳಿದನು.
Kannada Bible (KNCL) BSI 2016
ಕ್ರಮೇಣ ಈಜಿಪ್ಟಿಗೂ ಬರ ಬಂದಾಗ ಪ್ರಜೆಗಳು ಆಹಾರಬೇಕೆಂದು ಫರೋಹನಿಗೆ ಮೊರೆಯಿಟ್ಟರು. ಆಗ ಅವನು ಅವರಿಗೆ, “ಹೋಗಿ, ಜೋಸೆಫನ ಬಳಿಗೆ, ಅವನು ಹೇಳಿದಂತೆ ಮಾಡಿ,” ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಜಿಪ್ಟ್‌ದವರೆಲ್ಲಾ ಹಸಿದು, ಜನರು ಆಹಾರಕ್ಕಾಗಿ ಫರೋಹನ ಬಳಿಗೆ ಹೋಗಿ ಕೂಗಿಕೊಂಡಾಗ, ಫರೋಹನು ಎಲ್ಲಾ ಈಜಿಪ್ಟಿನವರಿಗೆ, “ಯೋಸೇಫನ ಬಳಿಗೆ ಹೋಗಿರಿ, ಅವನು ನಿಮಗೆ ಹೇಳುವುದನ್ನು ಮಾಡಿರಿ,” ಎಂದನು.