Genesis 41:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮರುದಿನ ಮುಂಜಾನೆ ಈ ಕನಸುಗಳ ಬಗ್ಗೆ ತುಂಬ ಚಿಂತೆಗೊಳಗಾಗಿ ಈಜಿಪ್ಟಿನಲ್ಲಿದ್ದ ಎಲ್ಲಾ ಮಂತ್ರಗಾರರನ್ನೂ ಎಲ್ಲಾ ವಿದ್ವಾಂಸರನ್ನೂ ಕರೆಯಿಸಿ ಕನಸುಗಳನ್ನು ತಿಳಿಸಿದನು. ಆದರೆ ಅವರಲ್ಲಿ ಯಾರಿಗೂ ಕನಸುಗಳ ಅರ್ಥವನ್ನು ತಿಳಿಸುವುದಕ್ಕಾಗಲಿ ವಿವರಿಸುವುದಕ್ಕಾಗಲಿ ಆಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಳಿಗ್ಗೆ ಫರೋಹನು ಮನದಲ್ಲಿ ಕಳವಳಗೊಂಡು, ಐಗುಪ್ತದೇಶದಲ್ಲಿದ್ದ ಎಲ್ಲಾ ಜೋಯಿಸರನ್ನೂ, ವಿದ್ವಾಂಸರನ್ನೂ ಬರುವಂತೆ ಹೇಳಿಕಳುಹಿಸಿದನು. ಅವರಿಗೆ ತನ್ನ ಕನಸನ್ನು ತಿಳಿಸಲಾಗಿ, ಅದರ ಅರ್ಥವನ್ನು ಅವನಿಗೆ ಹೇಳ ಬಲ್ಲವರು ಅವರಲ್ಲಿ ಒಬ್ಬನೂ ಸಿಕ್ಕಲಿಲ್ಲ.
Kannada BSI Bible 2016
ಬೆಳಿಗ್ಗೆ ಅವನ ಆತ್ಮವು ಕಳವಳಗೊಂಡಿತು. ಆದದರಿಂದ ಅವನು ಐಗುಪ್ತದ ಎಲ್ಲಾ ಮಂತ್ರವಾದಿ ಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೇಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ ಅವನಿಗೆ ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಳಿಗ್ಗೆ ಅವನು ಮನದಲ್ಲಿ ಕಳವಳಗೊಂಡು ಐಗುಪ್ತದೇಶದಲ್ಲಿದ್ದ ಎಲ್ಲಾ ಜೋಯಿಸರನ್ನೂ ವಿದ್ವಾಂಸರನ್ನೂ ಕರಸಿ ಅವರಿಗೆ ತನ್ನ ಕನಸನ್ನು ತಿಳಿಸಲಾಗಿ ಅದರ ಅರ್ಥವನ್ನು ಅವನಿಗೆ ಹೇಳಬಲ್ಲವರು ಅವರಲ್ಲಿ ಒಬ್ಬರೂ ಸಿಕ್ಕಲಿಲ್ಲ.
Kannada Bible (KNCL) BSI 2016
ಬೆಳಿಗ್ಗೆ ಅವನ ಮನಸ್ಸು ಕಳವಳಗೊಂಡು ಇತ್ತು. ಈಜಿಪ್ಟ್ ದೇಶದ ಎಲ್ಲ ಜೋಯಿಸರನ್ನೂ ವಿದ್ವಾಂಸರನ್ನೂ ಬರಮಾಡಿದ. ಅವರಿಗೆ ತನ್ನ ಕನಸನ್ನು ವಿವರಿಸಿದ. ಅದರ ಅರ್ಥವನ್ನು ಅವನಿಗೆ ಹೇಳಬಲ್ಲವರು ಯಾರೂ ಸಿಕ್ಕಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಳಿಗ್ಗೆ ಅವನ ಮನಸ್ಸು ಕಳವಳಗೊಂಡಿತು. ಆದ್ದರಿಂದ ಅವನು ಈಜಿಪ್ಟಿನ ಎಲ್ಲಾ ಮಂತ್ರವಾದಿಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೆಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ, ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.