Genesis 42:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಜಿಪ್ಟಿನಲ್ಲಿ ದವಸಧಾನ್ಯಗಳಿರುವುದಾಗಿ ಕಾನಾನಿನಲ್ಲಿದ್ದ ಯಾಕೋಬನಿಗೆ ತಿಳಿಯಿತು. ಆದ್ದರಿಂದ ಯಾಕೋಬನು ತನ್ನ ಗಂಡುಮಕ್ಕಳಿಗೆ, “ನಾವು ಇಲ್ಲಿ ಏನೂ ಮಾಡದೆ ಕುಳಿತುಕೊಂಡಿರುವುದೇಕೆ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐಗುಪ್ತ ದೇಶದಲ್ಲಿ ದವಸಧಾನ್ಯವುಂಟೆಂದು ಯಾಕೋಬನು ತಿಳಿದಾಗ ತನ್ನ ಮಕ್ಕಳಿಗೆ, “ನೀವು ಒಬ್ಬರನ್ನೊಬ್ಬರು ನೋಡಿಕೊಂಡಿರುವುದೇಕೆ?”
Kannada BSI Bible 2016
ಐಗುಪ್ತದಲ್ಲಿ ಧಾನ್ಯ ಉಂಟೆಂದುಯಾಕೋಬನು ತಿಳಿದಾಗ ಅವನು ತನ್ನ ಕುಮಾರರಿಗೆನೀವು ಒಬ್ಬರನ್ನೊಬ್ಬರು ನೋಡಿಕೊಳ್ಳು ವದೇನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐಗುಪ್ತದೇಶದಲ್ಲಿ ದವಸಧಾನ್ಯವುಂಟೆಂದು ಯಾಕೋಬನು ಕೇಳಿ ತನ್ನ ಮಕ್ಕಳಿಗೆ - ನೀವು ಒಬ್ಬರನ್ನೊಬ್ಬರು ನೋಡುತ್ತಿರುವದೇಕೆ?
Kannada Bible (KNCL) BSI 2016
ಈಜಿಪ್ಟಿನಲ್ಲಿ ದವಸಧಾನ್ಯ ದೊರಕುತ್ತದೆ ಎಂಬ ಸಮಾಚಾರ ಯಕೋಬನಿಗೆ ಮುಟ್ಟಿತು. ಅವನು ತನ್ನ ಮಕ್ಕಳಿಗೆ, “ನೀವು ಮುಖಮುಖ ನೋಡಿಕೊಂಡು ಸುಮ್ಮನಿರುವುದು ಸರಿಯಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಜಿಪ್ಟಿನಲ್ಲಿ ಧಾನ್ಯ ಉಂಟೆಂದು ಯಾಕೋಬನು ತಿಳಿದಾಗ, ಅವನು ತನ್ನ ಪುತ್ರರಿಗೆ, “ನೀವು ಒಬ್ಬರನ್ನೊಬ್ಬರು ನೋಡಿಕೊಂಡು ಸುಮ್ಮನಿರುವುದೇನು?” ಎಂದನು.