Genesis 42:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದಕ್ಕೆ ಅವರು, “ಇಲ್ಲ, ನಾವೆಲ್ಲಾ ಸಹೋದರರು. ನಮ್ಮ ಕುಟುಂಬದಲ್ಲಿ ಹನ್ನೆರಡು ಮಂದಿ ಅಣ್ಣತಮ್ಮಂದಿರು. ನಮ್ಮೆಲ್ಲರಿಗೂ ಒಬ್ಬನೇ ತಂದೆ. ನಮ್ಮ ಕಿರಿಯ ತಮ್ಮನು ನಮ್ಮ ತಂದೆಯೊಂದಿಗೆ ಮನೆಯಲ್ಲಿದ್ದಾನೆ; ಇನ್ನೊಬ್ಬ ತಮ್ಮನು ಹೊರಟುಹೋದನು. ತಮ್ಮ ಸೇವಕರಾದ ನಾವು ಕಾನಾನ್ ದೇಶದಿಂದ ಬಂದವರು” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅವರು, “ತಮ್ಮ ಸೇವಕರಾದ ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರು, ನಾವು ಕಾನಾನ್ ದೇಶದವರು, ಒಬ್ಬ ತಂದೆಯ ಮಕ್ಕಳು. ನಮ್ಮಲ್ಲಿ ಚಿಕ್ಕವನು ತಂದೆಯ ಬಳಿಯಲ್ಲಿದ್ದಾನೆ. ಮತ್ತೊಬ್ಬನು ಇಲ್ಲ” ಎಂದರು.
Kannada BSI Bible 2016
ಅದಕ್ಕವರು--ನಿನ್ನ ದಾಸರಾದ ನಾವು ಹನ್ನೆರಡು ಮಂದಿ ಸಹೋದರರು; ನಾವು ಕಾನಾನ್‌ ದೇಶದಲ್ಲಿರುವ ಒಬ್ಬ ಮನುಷ್ಯನ ಮಕ್ಕಳು. ಇಗೋ, ಈಗ ಚಿಕ್ಕವನು ನಮ್ಮ ತಂದೆಯೊಂದಿಗೆ ಇದ್ದಾನೆ. ಮತ್ತೊಬ್ಬನು ಇಲ್ಲ ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು - ತಮ್ಮ ಸೇವಕರಾದ ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರು; ನಾವು ಕಾನಾನ್ ದೇಶದವರು, ಒಬ್ಬ ತಂದೆಯ ಮಕ್ಕಳು; ನಮ್ಮಲ್ಲಿ ಚಿಕ್ಕವನು ತಂದೆಯ ಬಳಿಯಲ್ಲಿದ್ದಾನೆ; ಒಬ್ಬನಿಲ್ಲ ಅಂದರು.
Kannada Bible (KNCL) BSI 2016
ಅದಕ್ಕೆ ಅವರು, “ತಮ್ಮ ಸೇವಕರಾದ ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರು; ಕಾನಾನ್ ನಾಡಿನವರು, ಒಬ್ಬ ತಂದೆಯ ಮಕ್ಕಳು; ನಮ್ಮಲ್ಲಿ ಚಿಕ್ಕವನು ತಂದೆಯ ಬಳಿಯಲ್ಲೇ ಇದ್ದಾನೆ; ಒಬ್ಬನು ಇಲ್ಲವಾದನು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕವರು, “ನಿನ್ನ ದಾಸರಾದ ನಾವು ಹನ್ನೆರಡು ಸಹೋದರರು. ನಾವು ಕಾನಾನ್ ದೇಶದಲ್ಲಿರುವ ಒಬ್ಬ ಮನುಷ್ಯನ ಮಕ್ಕಳು. ಈಗ ಚಿಕ್ಕವನು ನನ್ನ ತಂದೆಯೊಂದಿಗೆ ಇದ್ದಾನೆ, ಮತ್ತೊಬ್ಬನು ಇಲ್ಲ,” ಎಂದು ಹೇಳಿದರು.