Genesis 42:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನೀವು ಹೇಳುತ್ತಿರುವುದು ಸತ್ಯವಾಗಿದ್ದರೆ ನಿಮ್ಮ ಚಿಕ್ಕ ತಮ್ಮನು ಇಲ್ಲಿಗೆ ಬರಬೇಕು; ಇಲ್ಲವಾದರೆ ಫರೋಹನ ಜೀವದಾಣೆ, ಅಲ್ಲಿಯವರೆಗೂ ನೀವು ಈ ಸ್ಥಳದಿಂದ ಹೋಗಕೂಡದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಪರೀಕ್ಷಿಸಲ್ಪಡುವುದು ಹೇಗೆಂದರೆ, ನಿಮ್ಮ ಚಿಕ್ಕ ತಮ್ಮನು ಬರಬೇಕು. ಅವನು ಬಂದ ಹೊರತು ಫರೋಹನ ಜೀವದಾಣೆ ನೀವು ಇಲ್ಲಿಂದ ಹೊರಟು ಹೋಗಬಾರದು.
Kannada BSI Bible 2016
ನೀವು ಪರೀಕ್ಷಿಸಲ್ಪಡುವದು ಹೇಗಂದರೆ--ನಿಮ್ಮ ತಮ್ಮನನ್ನು ಇಲ್ಲಿಗೆ ತಾರದ ಹೊರತು ಫರೋಹನ ಜೀವದಾಣೆ ನೀವು ಇಲ್ಲಿಂದ ಹೊರಗೆ ಹೋಗಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ಹೌದೋ ಅಲ್ಲವೋ ಗೊತ್ತಾಗುವದಕ್ಕಾಗಿ ನಿಮ್ಮ ತಮ್ಮನು ಬರಬೇಕು; ಅವನು ಬಂದ ಹೊರತು ಫರೋಹನ ಜೀವದಾಣೆ ನೀವು ಇಲ್ಲಿಂದ ಹೊರಟು ಹೋಗಕೂಡದು.
Kannada Bible (KNCL) BSI 2016
ಇದು ನಿಜವೋ ಸುಳ್ಳೋ ಎಂದು ಗೊತ್ತಾಗಬೇಕಾದರೆ ನೀವು ನಿಮ್ಮ ತಮ್ಮನನ್ನು ಬರಮಾಡಬೇಕು. ಅವನು ಬಂದ ಹೊರತು, ಫರೋಹನ ಜೀವದಾಣೆ, ನೀವು ಇಲ್ಲಿಂದ ಹೊರಟುಹೋಗಕೂಡದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ನಿಮ್ಮನ್ನು ನಾನು ಪರೀಕ್ಷಿಸುತ್ತೇನೆ. ಹೇಗೆಂದರೆ, ನಿಮ್ಮ ಚಿಕ್ಕ ಸಹೋದರನು ಇಲ್ಲಿಗೆ ಬಂದ ಹೊರತು, ಫರೋಹನ ಜೀವದಾಣೆ ನೀವು ಇಲ್ಲಿಂದ ಹೋಗಬಾರದು.