Genesis 42:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ನಿಮ್ಮಲ್ಲೊಬ್ಬನು ಹಿಂತಿರುಗಿ ಹೋಗಿ ನಿಮ್ಮ ಚಿಕ್ಕ ತಮ್ಮನನ್ನು ಇಲ್ಲಿಗೆ ಕರೆದುಕೊಂಡು ಬರಬೇಕು. ಅಲ್ಲಿಯವರೆಗೆ ಉಳಿದವರೆಲ್ಲರೂ ಇಲ್ಲಿ ಸೆರೆಮನೆಯಲ್ಲಿರಬೇಕು. ನೀವು ಹೇಳುತ್ತಿರುವುದು ಸತ್ಯವೋ ಸುಳ್ಳೋ ಆಗ ನನಗೆ ಗೊತ್ತಾಗುವುದು. ಆದರೆ ನೀವಂತೂ ಗೂಢಚಾರರೆಂದು ತಿಳಿದುಕೊಂಡಿದ್ದೇನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನನ್ನು ಕರೆದುಕೊಂಡು ಬರುವುದಕ್ಕೆ ನಿಮ್ಮಲ್ಲಿ ಒಬ್ಬನನ್ನು ಕಳುಹಿಸಿರಿ. ಅವನು ಬರುವವರೆಗೂ ನಿಮ್ಮನ್ನು ಸೆರೆಯಲ್ಲಿ ಇಡುತ್ತೇನೆ. ಹೀಗೆ ನಾನು ನಿಮ್ಮ ಮಾತುಗಳನ್ನು ಪರೀಕ್ಷಿಸಿ ನೀವು ಸತ್ಯವಂತರೋ ಅಲ್ಲವೋ ಎಂದು ತಿಳಿದುಕೊಳ್ಳುತ್ತೇನೆ. ನಿಮ್ಮ ತಮ್ಮನು ಬಾರದೆ ಹೋದರೆ ಫರೋಹನ ಜೀವದಾಣೆ ನೀವು ಗೂಢಚಾರರೇ” ಎಂದು ಹೇಳಿದನು.
Kannada BSI Bible 2016
ನಿಮ್ಮಲ್ಲಿ ಒಬ್ಬನನ್ನು ಕಳುಹಿಸಿರಿ; ಅವನು ನಿಮ್ಮ ಸಹೋದರ ನನ್ನು ಕರಕೊಂಡು ಬರಲಿ. ಆದರೆ ನೀವು ಸೆರೆಮನೆ ಯಲ್ಲಿರಬೇಕು. ಹೀಗೆ ನಿಮ್ಮಲ್ಲಿ ಸತ್ಯವು ಉಂಟೋ ಇಲ್ಲವೋ ಎಂದು ನಿಮ್ಮ ಮಾತುಗಳು ಪರೀಕ್ಷಿಸಲ್ಪಡು ವವು. ಇಲ್ಲದಿದ್ದರೆ ಫರೋಹನ ಜೀವದಾಣೆ ನಿಶ್ಚಯವಾಗಿ ನೀವು ಗೂಢಚಾರರು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನನ್ನು ಕರೆದುಕೊಂಡು ಬರುವದಕ್ಕೆ ನಿಮ್ಮಲ್ಲಿ ಒಬ್ಬನನ್ನು ಕಳುಹಿಸಿರಿ; ಅವನು ಬರುವವರೆಗೂ ನಿಮ್ಮನ್ನು ಸೆರೆಯಲ್ಲಿ ಇಡಿಸುತ್ತೇನೆ. ಹೀಗೆ ನಾನು ನಿಮ್ಮ ಮಾತುಗಳನ್ನು ಪರೀಕ್ಷಿಸಿ ನೀವು ಸತ್ಯವಂತರೋ ಅಲ್ಲವೋ ಎಂದು ತಿಳಿದುಕೊಳ್ಳುತ್ತೇನೆ. ನಿಮ್ಮ ತಮ್ಮನು ಬಾರದೆ ಹೋದರೆ, ಫರೋಹನ ಜೀವದಾಣೆ, ನೀವು ಗೂಢಚಾರರೇ ಎಂದು ಹೇಳಿ
Kannada Bible (KNCL) BSI 2016
ಅವನನ್ನು ಕರೆದುಕೊಂಡು ಬರುವುದಕ್ಕೆ ನಿಮ್ಮಲ್ಲಿ ಒಬ್ಬನನ್ನು ಕಳಿಸಿರಿ. ಅವನು ಬರುವವರೆಗೂ ನಿಮ್ಮನ್ನು ಸೆರೆಯಲ್ಲಿ ಇರಿಸುತ್ತೇನೆ. ಹೀಗೆ ನಿಮ್ಮ ಮಾತುಗಳನ್ನು ಪರೀಕ್ಷಿಸಿ ನೀವು ಸತ್ಯವಂತರೋ ಇಲ್ಲವೋ ಎಂದು ತಿಳಿದುಕೊಳ್ಳುತ್ತೇನೆ. ನಿಮ್ಮ ತಮ್ಮನು ಬಾರದೆ ಹೋದರೆ, ಫರೋಹನ ಜೀವದಾಣೆ, ನೀವು ಗೂಢಚಾರರೇ,” ಎಂದು ಹೇಳಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮಲ್ಲಿಂದ ಒಬ್ಬನನ್ನು ಕಳುಹಿಸಿರಿ, ಅವನು ನಿಮ್ಮ ಸಹೋದರನನ್ನು ಕರೆದುಕೊಂಡು ಬರಲಿ. ಆದರೆ ನೀವು ಸೆರೆಮನೆಯಲ್ಲಿರಬೇಕು. ಹೀಗೆ ನಿಮ್ಮಲ್ಲಿ ಸತ್ಯವು ಉಂಟೋ, ಇಲ್ಲವೋ ಎಂದು ನಿಮ್ಮ ಮಾತುಗಳನ್ನು ಪರೀಕ್ಷಿಸುತ್ತೇನೆ. ಇಲ್ಲದಿದ್ದರೆ, ಫರೋಹನ ಜೀವದಾಣೆ ನಿಶ್ಚಯವಾಗಿ ನೀವು ಗೂಢಚಾರರು,” ಎಂದು ಹೇಳಿದನು.