Genesis 42:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಜಿಪ್ಟಿನಲ್ಲಿ ದವಸಧಾನ್ಯಗಳಿರುವುದಾಗಿ ನಾನು ಕೇಳಿದ್ದೇನೆ. ಆದ್ದರಿಂದ ನಾವು ಅಲ್ಲಿಗೆ ಹೋಗಿ ನಮ್ಮ ಆಹಾರವನ್ನು ಕೊಂಡುಕೊಳ್ಳೋಣ. ಆಗ ನಾವು ಸಾಯದೆ ಬದುಕಿಕೊಳ್ಳುವೆವು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬುದನ್ನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ ಬೇಕಾದ ದವಸವನ್ನು ಖರೀದಿಸಿಕೊಂಡು ಬನ್ನಿರಿ” ಎಂದು ಹೇಳಿದನು.
Kannada BSI Bible 2016
ಅವನು--ಇಗೋ, ಐಗುಪ್ತದಲ್ಲಿ ಧಾನ್ಯ ಉಂಟೆಂದು ನಾನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಇಳಿದು ಹೋಗಿ ನಮಗಾಗಿ ಅಲ್ಲಿಂದ ಧಾನ್ಯವನ್ನು ಕೊಂಡು ಕೊಳ್ಳಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬದನ್ನು ಕೇಳಿದ್ದೇನೆ; ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ ಬೇಕಾದ ದವಸವನ್ನು ಕೊಂಡುಕೊಂಡು ಬನ್ನಿರಿ ಎಂದು ಹೇಳಿದ್ದರಿಂದ
Kannada Bible (KNCL) BSI 2016
ಈಜಿಪ್ಟಿನಲ್ಲಿ ದವಸಧಾನ್ಯ ಉಂಟೆಂದು ನಾನು ಕೇಳಿದ್ದೇನೆ, ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ, ಬೇಕಾದ ದವಸವನ್ನು ಕೊಂಡುಕೊಂಡು ಬನ್ನಿ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಮುಂದುವರಿಸಿ, “ಈಜಿಪ್ಟಿನಲ್ಲಿ ಧಾನ್ಯ ಉಂಟೆಂದು ನಾನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಇಳಿದು ಹೋಗಿ, ನಮಗಾಗಿ ಅಲ್ಲಿಂದ ಧಾನ್ಯವನ್ನು ಕೊಂಡುಕೊಳ್ಳಿರಿ,” ಎಂದನು.