Genesis 42:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ನಿಮ್ಮ ಕಿರಿಯ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬಂದರೆ ನೀವು ಹೇಳುತ್ತಿರುವುದು ಸತ್ಯವೆಂದು ತಿಳಿದುಕೊಳ್ಳುವೆನು” ಎಂದು ಹೇಳಿದನು. ಸಹೋದರರು ಇದಕ್ಕೆ ಒಪ್ಪಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು. ಕರೆದುಕೊಂಡು ಬಂದರೆ ನಿಮ್ಮ ಮಾತನ್ನು ಸತ್ಯವೆಂದು ನಾನು ತಿಳಿದುಕೊಳ್ಳುವುದರಿಂದ ನೀವು ಸಾಯುವುದಿಲ್ಲ” ಎಂದನು. ಅವರು ಹಾಗೆಯೇ ಮಾಡಲು ಒಪ್ಪಿದರು.
Kannada BSI Bible 2016
ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರತನ್ನಿರಿ. ಆಗ ನಿಮ್ಮ ಮಾತುಗಳು ಸತ್ಯವೆಂದು ದೃಢವಾಗುವವು, ನೀವು ಸಾಯದೆ ಇರುವಿರಿ ಅಂದನು. ಅವರು ಹಾಗೆಯೇ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಬಳಿಗೆ ಕರೆದುಕೊಂಡು ಬರಬೇಕು; ಕರೆದುಕೊಂಡು ಬಂದರೆ, ನಿಮ್ಮ ಮಾತನ್ನು ಸತ್ಯವೆಂದು ನಾನು ತಿಳಿದುಕೊಳ್ಳುವದರಿಂದ ನೀವು ಸಾಯುವದಿಲ್ಲ ಅಂದನು. ಅವರು ಆ ಮಾತಿಗೆ ಒಪ್ಪಿದರು.
Kannada Bible (KNCL) BSI 2016
ಆದರೆ ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು, ಕರೆದುಕೊಂಡು ಬಂದರೆ, ನಿಮ್ಮ ಮಾತು ಸತ್ಯವೆಂದು ತಿಳಿದುಕೊಳ್ಳುತ್ತೇನೆ, ಆಗ ನೀವು ಸಾಯದೆ ಉಳಿಯುವಿರಿ,” ಎಂದನು. ಅವರು ಹಾಗೆಯೇ ಮಾಡಲು ಒಪ್ಪಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಚಿಕ್ಕ ತಮ್ಮನನ್ನು ನನ್ನ ಬಳಿಗೆ ಕರೆತನ್ನಿರಿ. ಆಗ ನಿಮ್ಮ ಮಾತುಗಳು ಸತ್ಯವೆಂದು ದೃಢವಾಗುವವು. ನೀವು ಸಾಯದೆ ಉಳಿಯುವಿರಿ,” ಎಂದನು. ಅವರು ಹಾಗೆಯೇ ಮಾಡಿದರು.