Genesis 42:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಒಬ್ಬರಿಗೊಬ್ಬರು, “ನಾವು ನಮ್ಮ ತಮ್ಮನಾದ ಯೋಸೇಫನಿಗೆ ಮಾಡಿದ ಕೆಟ್ಟಕಾರ್ಯಕ್ಕಾಗಿ ಈ ಶಿಕ್ಷೆಯನ್ನು ಅನುಭವಿಸುತ್ತಿದ್ದೇವೆ. ಪ್ರಾಣಸಂಕಟದಲ್ಲಿದ್ದ ಅವನು ತನ್ನನ್ನು ಕಾಪಾಡುವಂತೆ ನಮ್ಮನ್ನು ಬೇಡಿಕೊಂಡರೂ ನಾವು ಅವನ ಮೊರೆಯನ್ನು ತಿರಸ್ಕರಿಸಿದೆವು. ಆದ್ದರಿಂದ ಈಗ ಪ್ರಾಣಸಂಕಟಕ್ಕೀಡಾಗಿದ್ದೇವೆ” ಎಂದು ಮಾತಾಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವರು ತಮ್ಮ ತಮ್ಮೊಳಗೆ ಮಾತನಾಡಿಕೊಂಡು, “ನಾವು ನಮ್ಮ ತಮ್ಮನಿಗೆ ಮಾಡಿದ್ದು ಅಪರಾಧವೇ ಸರಿ. ಅವನು ನಮ್ಮನ್ನು ಬೇಡಿಕೊಂಡಾಗ ನಾವು ಅವನ ಪ್ರಾಣಸಂಕಟವನ್ನು ತಿಳಿದರೂ ಅವನ ಮೊರೆಗೆ ಕಿವಿಗೊಡಲಿಲ್ಲ. ಆ ಕಾರಣದಿಂದಲೇ ಈ ಸಂಕಟವು ನಮಗೆ ಪ್ರಾಪ್ತವಾಗಿದೆ” ಎಂದು ಮಾತನಾಡಿಕೊಂಡರು.
Kannada BSI Bible 2016
ಆಗ ಅವರು--ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ ಅವನ ಪ್ರಾಣ ಸಂಕಟವನ್ನು ನೋಡಿಯೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು ಎಂದು ಅಂದುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅವರು ತಮ್ಮತಮ್ಮೊಳಗೆ - ನಾವು ನಮ್ಮ ತಮ್ಮನಿಗೆ ಮಾಡಿದ್ದು ದ್ರೋಹವೇ ಸರಿ; ಅವನು ನಮ್ಮನ್ನು ಬೇಡಿಕೊಂಡಾಗ ನಾವು ಅವನ ಪ್ರಾಣಸಂಕಟವನ್ನು ತಿಳಿದರೂ ಅವನ ಮೊರೆಗೆ ಕಿವಿಗೊಡಲಿಲ್ಲ; ಆ ಕಾರಣದಿಂದಲೇ ಈ ಸಂಕಟವು ನಮಗೆ ಪ್ರಾಪ್ತವಾಗಿದೆ ಎಂದು ಮಾತಾಡಿಕೊಂಡರು.
Kannada Bible (KNCL) BSI 2016
ಆಗ ಅವರು ತಮ್ಮತಮ್ಮೊಳಗೆ, “ನಾವು ನಮ್ಮ ತಮ್ಮನಿಗೆ ಮಾಡಿದ ದ್ರೋಹಕ್ಕೆ ತಕ್ಕ ದಂಡನೆಯನ್ನು ಅನುಭವಿಸುತ್ತಿದ್ದೇವೆ. ಅವನು ನಮ್ಮನ್ನು ಕಳಕಳಿ ಬೇಡಿಕೊಂಡ. ಅವನ ಪ್ರಾಣಸಂಕಟವನ್ನು ತಿಳಿದೂ ನಾವು ಅವನ ಮೊರೆಗೆ ಕಿವಿಗೊಡಲಿಲ್ಲ. ಆದ್ದರಿಂದಲೆ ಈ ಸಂಕಟದಲ್ಲಿ ಸಿಕ್ಕಿಹಾಕಿಕೊಂಡು ಇದ್ದೇವೆ,” ಎಂದು ಮಾತಾಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು, “ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ, ಅವನ ಪ್ರಾಣಸಂಕಟವನ್ನು ಕಂಡರೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು,” ಎಂದು ಮಾತಾಡಿಕೊಂಡರು.