Genesis 42:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಸೇಫನು ತನ್ನ ಸಹೋದರರೊಂದಿಗೆ ಭಾಷಾಂತರಕಾರನ ಮೂಲಕ ಮಾತಾಡುತ್ತಿದ್ದನು. ಆದ್ದರಿಂದ ಆ ಸಹೋದರರು ತಮ್ಮ ಭಾಷೆ ಯೋಸೇಫನಿಗೆ ಅರ್ಥವಾಗುವುದಿಲ್ಲವೆಂದು ತಿಳಿದುಕೊಂಡಿದ್ದರು. ಆದರೆ ಯೋಸೇಫನಿಗೆ ಅವರ ಮಾತುಗಳೆಲ್ಲಾ ಅರ್ಥವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಸೇಫನು ದ್ವಿಭಾಷೆಯಲ್ಲಿ ಮಾತನಾಡಬಲ್ಲ ಅನುವಾದಕರೊಂದಿಗೆ ಮಾತನಾಡಿದ್ದರಿಂದ ಅವರು ತಮ್ಮ ಮಾತು ಅವನಿಗೆ ಗೊತ್ತಾಗುತ್ತದೆಂದು ತಿಳಿಯಲಿಲ್ಲ.
Kannada BSI Bible 2016
ಆದರೆ ಅವನು ಅವರು ಆಡಿದ್ದನ್ನು ತಿಳಿದುಕೊಳ್ಳುತ್ತಾನೆಂದು ಅವರಿಗೆ ಗೊತ್ತಾಗಲಿಲ್ಲ; ದ್ವಿಭಾಷೆಯಿಂದ ಅವರ ಸಂಗಡ ಮಾತನಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಸೇಫನು ದ್ವಿಭಾಷಿಯ ಮುಖಾಂತರ ಅವರ ಸಂಗಡ ಮಾತಾಡಿದದರಿಂದ, ಅವರು ತಮ್ಮ ಮಾತು ಅವನಿಗೆ ಗೊತ್ತಾಗುವದೆಂದು ನೆನಸಲೇ ಇಲ್ಲ.
Kannada Bible (KNCL) BSI 2016
ಜೋಸೆಫನು ಒಬ್ಬ ಅನುವಾದಕನ ಮುಖಾಂತರ ಅವರ ಸಂಗಡ ಮಾತಾಡುತ್ತಿದ್ದುದರಿಂದ ಅವನಿಗೆ ತಮ್ಮ ಮಾತು ಗೊತ್ತಾಗುತ್ತಿದೆ ಎಂದು ಅವರು ನೆನೆಸಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೋಸೇಫನು ಅವರು ಆಡಿದ್ದನ್ನು ತಿಳಿದುಕೊಳ್ಳುತ್ತಿದ್ದನು ಎಂಬುದು ಅವರಿಗೆ ಗೊತ್ತಾಗಲಿಲ್ಲ. ಏಕೆಂದರೆ ಯೋಸೇಫನು ಅನುವಾದಕನ ಮುಖಾಂತರ ಅವರ ಸಂಗಡ ಮಾತಾಡುತ್ತಿದ್ದನು.