Genesis 42:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರ ಮಾತುಗಳಿಂದ ಅವನಿಗೆ ತುಂಬ ದುಃಖವಾಯಿತು. ಆದ್ದರಿಂದ ಯೋಸೇಫನು ಅವರ ಬಳಿಯಿಂದ ಸ್ವಲ್ಪದೂರ ಹೋಗಿ ಕಣ್ಣೀರು ಸುರಿಸಿ ಹಿಂತಿರುಗಿ ಬಂದನು. ಬಳಿಕ ಸಹೋದರರಲ್ಲಿ ಒಬ್ಬನಾದ ಸಿಮೆಯೋನನನ್ನು ಅವರ ಕಣ್ಣೆದುರಿನಲ್ಲೇ ಬಂಧಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಸೇಫನಾದರೋ ಅವರ ಬಳಿಯಿಂದ ಹೊರಟು ಹೋಗಿ ಅತ್ತನು. ತರುವಾಯ ಅವರ ಬಳಿಗೆ ಹಿಂತಿರುಗಿ ಬಂದು ಅವರ ಸಂಗಡ ಮಾತನಾಡಿ ಅವರೊಳಗೆ ಸಿಮೆಯೋನನನ್ನು ಹಿಡಿಸಿ ಅವರ ಕಣ್ಣೆದುರಿಗೆ ಅವನಿಗೆ ಬೇಡಿಗಳನ್ನು ಹಾಕಿಸಿದನು.
Kannada BSI Bible 2016
ಆಗ ಅವನು ಅವರ ಕಡೆಯಿಂದ ಹೊರಟುಹೋಗಿ ಅತ್ತು ಮತ್ತೆ ಅವರ ಬಳಿಗೆ ಬಂದು ಅವರ ಸಂಗಡ ಮಾತನಾಡಿ ಅವರಲ್ಲಿ ಸಿಮೆಯೋನನನ್ನು ಹಿಡಿಸಿ ಅವರ ಕಣ್ಣೆದುರಿನಲ್ಲಿ ಬಂಧಿಸಿ ಸೆರೆಯಲ್ಲಿ ಹಾಕಿಸಿದನು..
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಸೇಫನಾದರೋ ಅವರ ಬಳಿಯಿಂದ ಒಂದು ಕಡೆಗೆ ಹೋಗಿ ಕಣ್ಣೀರು ಸುರಿಸಿದನು. ತರುವಾಯ ಅವರ ಬಳಿಗೆ ತಿರಿಗಿ ಬಂದು ಅವರ ಸಂಗಡ ಮಾತಾಡಿ ಅವರೊಳಗೆ ಸಿಮೆಯೋನನನ್ನು ಹಿಡಿಸಿ ಅವರ ಕಣ್ಣೆದುರಾಗಿ ಅವನಿಗೆ ಬೇಡಿಗಳನ್ನು ಹಾಕಿಸಿದನು.
Kannada Bible (KNCL) BSI 2016
ಜೋಸೆಫನಾದರೋ ಅವರ ಬಳಿಯಿಂದ ಮರೆಯಾಗಿ ಹೋಗಿ ಕಣ್ಣೀರು ಸುರಿಸಿದ. ತರುವಾಯ ಅವರ ಬಳಿಗೆ ಬಂದು, ಸಂಭಾಷಣೆ ಮುಂದುವರೆಸಿ, ಸಿಮೆಯೋನನನ್ನು ಆರಿಸಿ, ಅವರ ಕಣ್ಣೆದುರಿನಲ್ಲೇ ಅವನಿಗೆ ಬೇಡಿಹಾಕಿಸಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಯೋಸೇಫನು ಅವರ ಬಳಿಯಿಂದ ಹೊರಟುಹೋಗಿ ಅತ್ತನು. ಮತ್ತೆ ಅವರ ಬಳಿಗೆ ಬಂದು, ಅವರ ಸಂಗಡ ಮಾತನಾಡಿ ಅವರೊಂದಿಗೆ ಸಿಮೆಯೋನನನ್ನು ತಂದು, ಅವರ ಕಣ್ಣೆದುರಿನಲ್ಲಿ ಬಂಧಿಸಿ ಸೆರೆಯಲ್ಲಿ ಹಾಕಿದನು.