Genesis 42:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಮೇಲೆ ಯೋಸೇಫನು ತನ್ನ ಸೇವಕರಿಗೆ, “ಅವರ ಚೀಲಗಳಿಗೆ ದವಸಧಾನ್ಯಗಳನ್ನು ತುಂಬಿರಿ” ಎಂದು ಹೇಳಿದನು. ಈ ದವಸಧಾನ್ಯಗಳಿಗೆ ಸಹೋದರರು ಹಣವನ್ನು ಪಾವತಿ ಮಾಡಿದರೂ ಯೋಸೇಫನು ಆ ಹಣವನ್ನು ಇಟ್ಟುಕೊಳ್ಳಲಿಲ್ಲ. ಅವನು ಆ ಹಣವನ್ನು ಅವರವರ ದವಸಧಾನ್ಯಗಳ ಚೀಲಗಳಲ್ಲಿ ಇಡಿಸಿದನು. ಅಲ್ಲದೆ ಪ್ರಯಾಣಕ್ಕೆ ಬೇಕಾದ ವಸ್ತುಗಳನ್ನೂ ಅವರಿಗೆ ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಯೋಸೇಫನು ತನ್ನ ಆಳುಗಳಿಗೆ ಆ ಮನುಷ್ಯರ ಚೀಲಗಳಲ್ಲಿ ಧಾನ್ಯವನ್ನು ತುಂಬಿಸಿ ಒಬ್ಬೊಬ್ಬನ ಚೀಲದಲ್ಲಿ ಅವರವರು ತಂದಿದ್ದ ಹಣವನ್ನು ಅವರ ಚೀಲಗಳಲ್ಲೇ ಇಟ್ಟು ಅವರ ಪ್ರಯಾಣಕ್ಕೆ ಬೇಕಾದ ಆಹಾರವನ್ನು ಕೊಡಬೇಕೆಂದು ಅಪ್ಪಣೆ ಮಾಡಲು ಅವರು ಹಾಗೆಯೇ ಮಾಡಿದರು.
Kannada BSI Bible 2016
ತರುವಾಯ ಯೋಸೇಫನು ಧಾನ್ಯವನ್ನು ತುಂಬಿಸ ಬೇಕೆಂದೂ ಒಬ್ಬೊಬ್ಬನ ಚೀಲದಲ್ಲಿ ಅವನವನ ಹಣವನ್ನು ತಿರಿಗಿ ಇಡಬೇಕೆಂದೂ ಹಾದಿಗೋಸ್ಕರ ಅವರಿಗೆ ಆಹಾರ ಸರಬರಾಜು ಮಾಡಬೇಕೆಂದೂ ಆಜ್ಞಾಪಿಸಿದನು. ಹೀಗೆಯೇ ಅವನು ಅವರಿಗೆ ಮಾಡಿ ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಯೋಸೇಫನು ತನ್ನ ಆಳುಗಳಿಗೆ - ಆ ಮನುಷ್ಯರ ಚೀಲಗಳಲ್ಲಿ ಧಾನ್ಯವನ್ನು ತುಂಬಿಸಿ ಒಬ್ಬೊಬ್ಬನ ಚೀಲದಲ್ಲಿ ಅವನವನ ಹಣವನ್ನು ತಿರಿಗಿ ಇಟ್ಟು ಅವರ ಪ್ರಯಾಣಕ್ಕೆ ಬೇಕಾದ ಆಹಾರವನ್ನು ಕೊಡಬೇಕೆಂದು ಅಪ್ಪಣೆಮಾಡಲು ಅವರು ಹಾಗೆಯೇ ಮಾಡಿದರು.
Kannada Bible (KNCL) BSI 2016
ಇದಾದ ಬಳಿಕ ಜೋಸೆಫನು ತನ್ನ ಆಳುಗಳಿಗೆ, “ಆ ಜನರ ಚೀಲಗಳಲ್ಲಿ ಧಾನ್ಯವನ್ನು ತುಂಬಿಸಿ ಒಬ್ಬೊಬ್ಬನ ಚೀಲದಲ್ಲಿ ಅವನವನ ಹಣವನ್ನು ಅದರಲ್ಲಿ ಇಟ್ಟುಬಿಡಿ. ಅವರ ಪ್ರಯಾಣಕ್ಕೆ ಬೇಕಾದ ಅಹಾರವನ್ನು ಕೊಟ್ಟು ಕಳಿಸಿರಿ,” ಎಂದು ಅಪ್ಪಣೆ ಮಾಡಿದ. ಆಳುಗಳು ಅದರಂತೆಯೆ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಯೋಸೇಫನು ಧಾನ್ಯವನ್ನು ತುಂಬಿಸಬೇಕೆಂದೂ, ಒಬ್ಬೊಬ್ಬನ ಚೀಲದಲ್ಲಿ ಅವನವನ ಹಣವನ್ನು ತಿರುಗಿ ಇಡಬೇಕೆಂದೂ, ಪ್ರಯಾಣಕ್ಕಾಗಿ ಅವರಿಗೆ ಆಹಾರ ಸರಬರಾಜು ಮಾಡಬೇಕೆಂದೂ ಆಜ್ಞಾಪಿಸಿದನು.