Genesis 42:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರೆಂದೂ ನಮಗೆ ಒಬ್ಬನೇ ತಂದೆಯೆಂದೂ ಅವನಿಗೆ ಹೇಳಿದೆವು. ನಮ್ಮ ಒಬ್ಬ ತಮ್ಮನು ಸತ್ತುಹೋದನೆಂದೂ ನಮ್ಮ ಕಿರಿಯ ತಮ್ಮನು ಕಾನಾನ್ ದೇಶದಲ್ಲಿರುವ ನಮ್ಮ ಮನೆಯಲ್ಲಿರುವನೆಂದೂ ಅವನಿಗೆ ಹೇಳಿದೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಒಬ್ಬ ತಂದೆಯಿಂದಲೆ ಹುಟ್ಟಿದ ಹನ್ನೆರಡು ಮಂದಿ ಅಣ್ಣತಮ್ಮಂದಿರಾಗಿದ್ದೇವೆ. ನಮ್ಮಲ್ಲಿ ಒಬ್ಬನಿಲ್ಲ. ಚಿಕ್ಕವನು ಈಗ ಕಾನಾನ್ ದೇಶದಲ್ಲಿ ನಮ್ಮ ತಂದೆಯ ಬಳಿಯಲ್ಲಿದಾನೆ” ಎಂದು ಹೇಳಿದೆವು.
Kannada BSI Bible 2016
ನಾವು ಒಬ್ಬನೇ ತಂದೆಗೆ ಹುಟ್ಟಿದ ಹನ್ನೆರಡು ಮಂದಿ ಸಹೋದರರಾಗಿದ್ದೇವೆ; ಒಬ್ಬನು ಇಲ್ಲ; ಚಿಕ್ಕವನು ಇಂದು ನಮ್ಮ ತಂದೆಯ ಸಂಗಡ ಕಾನಾನ್‌ ದೇಶದಲ್ಲಿ ಇದ್ದಾನೆ ಅಂದೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಒಬ್ಬ ತಂದೆಯಿಂದಲೇ ಹುಟ್ಟಿದ ಹನ್ನೆರಡು ಮಂದಿ ಅಣ್ಣತಮ್ಮಂದಿರಾಗಿದ್ದೇವೆ; ನಮ್ಮಲ್ಲಿ ಒಬ್ಬನಿಲ್ಲ; ಚಿಕ್ಕವನೋ ಈಗ ಕಾನಾನ್ ದೇಶದಲ್ಲಿ ನಮ್ಮ ತಂದೆಯ ಬಳಿಯಲ್ಲಿದ್ದಾನೆ ಎಂದು ಹೇಳಿದೆವು.
Kannada Bible (KNCL) BSI 2016
ನಾವು ಒಬ್ಬ ತಂದೆಗೆ ಹುಟ್ಟಿದ ಹನ್ನೆರಡು ಮಂದಿ ಅಣ್ಣತಮ್ಮಂದಿರು; ನಮ್ಮಲ್ಲಿ ಒಬ್ಬನು ಇಲ್ಲವಾದ. ಚಿಕ್ಕವನೋ ಈಗ ಕಾನಾನ್ ನಾಡಿನಲ್ಲಿ ನಮ್ಮ ತಂದೆಯ ಬಳಿಯಲ್ಲಿದ್ದಾನೆ’ ಎಂದು ಹೇಳಿದೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ಹನ್ನೆರಡು ಮಂದಿ ಸಹೋದರರಾಗಿದ್ದು, ಒಂದೇ ತಂದೆಯ ಪುತ್ರರಾಗಿದ್ದೇವೆ, ಒಬ್ಬನು ಇಲ್ಲ, ಚಿಕ್ಕವನು ಇಂದು ನಮ್ಮ ತಂದೆಯ ಸಂಗಡ ಕಾನಾನ್ ದೇಶದಲ್ಲಿ ಇದ್ದಾನೆ,” ಎಂದೆವು.