Genesis 42:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆಗ ಆ ದೇಶದ ರಾಜ್ಯಪಾಲನು, ‘ನೀವು ಯಥಾರ್ಥವಂತರೆಂದು ತೋರಿಸಬೇಕಾದರೆ ನಿಮ್ಮ ಸಹೋದರರಲ್ಲಿ ಒಬ್ಬನನ್ನು ನನ್ನ ಬಳಿಯಲ್ಲಿ ಬಿಟ್ಟು ನಿಮ್ಮ ಕುಟುಂಬಗಳಿಗೆ ದವಸಧಾನ್ಯಗಳನ್ನು ತೆಗೆದುಕೊಂಡು ಹೋಗಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ “ದೇಶಾಧಿಪತಿ, ನೀವು ಸತ್ಯವಂತರೋ ಅಲ್ಲವೋ ಎಂಬುದು ಗೊತ್ತಾಗುವುದಕ್ಕಾಗಿ ನಿಮ್ಮೊಳಗೆ ಒಬ್ಬನನ್ನು ನನ್ನ ಬಳಿಯಲ್ಲಿ ಬಿಟ್ಟು ನಿಮ್ಮ ಮನೆಯವರ ಕ್ಷಾಮ ನಿವಾರಣೆಗೆ ಬೇಕಾದದ್ದನ್ನು ತೆಗೆದುಕೊಂಡು ಹೋಗಿ,
Kannada BSI Bible 2016
ಆಗ ದೇಶದ ಪ್ರಭುವಾಗಿರುವ ಆ ಮನುಷ್ಯನು--ನೀವು ಯಥಾರ್ಥರೆಂದು ನಾನು ಇದರ ಮೂಲಕ ತಿಳುಕೊಳ್ಳುವೆನು. ನೀವು ನಿಮ್ಮ ಸಹೋದರರಲ್ಲಿ ಒಬ್ಬನನ್ನು ನನ್ನ ಬಳಿಯಲ್ಲಿಟ್ಟು ನಿಮ್ಮ ಮನೆಯ ಕ್ಷಾಮಕ್ಕೆ ಅವಶ್ಯವಾದದ್ದನ್ನು ತಕ್ಕೊಂಡುಹೋಗಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ದೇಶಾಧಿಪತಿ - ನೀವು ಸತ್ಯವಂತರೋ ಅಲ್ಲವೋ ಎಂಬದು ಗೊತ್ತಾಗುವದಕ್ಕಾಗಿ ನಿಮ್ಮೊಳಗೆ ಒಬ್ಬನನ್ನು ನನ್ನ ಬಳಿಯಲ್ಲಿ ಬಿಟ್ಟು ನಿಮ್ಮ ಮನೆಯವರ ಕ್ಷಾಮ ನಿವಾರಣೆಗೆ ಬೇಕಾದದ್ದನ್ನು ತೆಗೆದುಕೊಂಡು ಹೋಗಿ
Kannada Bible (KNCL) BSI 2016
ಅದಕ್ಕೆ ಆ ದೇಶಾಧಿಪತಿ, “ನೀವು ಸತ್ಯವಂತರೋ ಇಲ್ಲವೋ ಎಂಬುದು ಗೊತ್ತಾಗುವುದಕ್ಕಾಗಿ ನಿಮ್ಮಲ್ಲಿ ಒಬ್ಬನನ್ನು ನನ್ನ ಬಳಿಯಲ್ಲೆ ಬಿಟ್ಟುಹೋಗಿ; ನಿಮ್ಮ ಕುಟುಂಬದವರ ಕ್ಷಾಮನಿವಾರಣೆಗೆ ಬೇಕಾದುದನ್ನು ತೆಗೆದುಕೊಂಡು ಹೋಗಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಗ ದೇಶದ ಪ್ರಭುವಾಗಿರುವ ಆ ಮನುಷ್ಯನು, ‘ನೀವು ಯಥಾರ್ಥರೆಂದು ನಾನು ಇದರಲ್ಲಿ ತಿಳಿದುಕೊಳ್ಳುವೆನು. ನೀವು ನಿಮ್ಮ ಸಹೋದರರಲ್ಲಿ ಒಬ್ಬನನ್ನು ನನ್ನ ಬಳಿಯಲ್ಲಿಟ್ಟು, ನಿಮ್ಮ ಮನೆಯ ಕ್ಷಾಮಕ್ಕೆ ಅವಶ್ಯವಾದದ್ದನ್ನು ತೆಗೆದುಕೊಂಡು ಹೋಗಿರಿ.