Genesis 42:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಮೇಲೆ ನಿಮ್ಮ ಕಿರಿಯ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ. ಆಗ ನೀವು ಯಥಾರ್ಥರಾದವರೋ ಗೂಢಚಾರರೋ ಎಂದು ಗೊತ್ತಾಗುವುದು. ನೀವು ಸತ್ಯವನ್ನು ಹೇಳಿದ್ದರೆ ನಿಮ್ಮ ಸಹೋದರನನ್ನು ನಿಮಗೆ ಒಪ್ಪಿಸುವೆನು; ನಮ್ಮ ದೇಶದಲ್ಲಿ ಆಹಾರವನ್ನು ಕೊಳ್ಳಲು ನಿಮಗೆ ಯಾವ ತಡೆಯೂ ಇರುವುದಿಲ್ಲ’ ಎಂದು ಹೇಳಿದನು” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು, ಕರೆದುಕೊಂಡು ಬಂದರೆ ನೀವು ಗೂಢಚಾರರಲ್ಲ ಸತ್ಯವಂತರೇ ಎಂದು ತಿಳಿದುಕೊಂಡು ನಿಮ್ಮ ಅಣ್ಣನನ್ನು ಸೆರೆಯಿಂದ ಬಿಡಿಸುತ್ತೇನೆ ಮತ್ತು ನೀವು ಈ ದೇಶದಲ್ಲಿ ವ್ಯಾಪಾರ ಮಾಡಬಹುದು” ಎಂದು ಹೇಳಿದನು ಎಂದರು.
Kannada BSI Bible 2016
ನಿಮ್ಮ ಚಿಕ್ಕ ತಮ್ಮನನ್ನು ನನ್ನ ಬಳಿಗೆ ತನ್ನಿರಿ, ಆಗ ನೀವು ಗೂಢಚಾರರಲ್ಲವೆಂದೂ ಯಥಾರ್ಥ ರೆಂದೂ ತಿಳುಕೊಂಡು ನಿಮ್ಮ ಸಹೋದರನನ್ನು ನಿಮಗೆ ಒಪ್ಪಿಸುವೆನು. ಆಗ ನೀವು ದೇಶದಲ್ಲಿ ವ್ಯಾಪಾರ ಮಾಡಬಹುದು ಎಂದು ಹೇಳಿದನು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರಕೊಂಡು ಬರಬೇಕು; ಕರಕೊಂಡು ಬಂದರೆ ನೀವು ಗೂಢಚಾರರಲ್ಲ, ಸತ್ಯವಂತರೇ ಎಂದು ತಿಳಿದುಕೊಂಡು ನಿಮ್ಮ ಅಣ್ಣನನ್ನು ಬಿಡಿಸಿಬಿಡುತ್ತೇನೆ, ಮತ್ತು ನೀವು ಈ ದೇಶದಲ್ಲಿ ವ್ಯಾಪಾರ ನಡಿಸಬಹುದೆಂದು ಹೇಳಿದನು ಅಂದರು.
Kannada Bible (KNCL) BSI 2016
ಆದರೆ ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು. ಕರೆದುಕೊಂಡು ಬಂದರೆ, ನೀವು ಗೂಢಚಾರರಲ್ಲ. ಸತ್ಯವಂತರೇ ಎಂದು ತಿಳಿದುಕೊಳ್ಳುತ್ತೇನೆ; ನಿಮ್ಮ ಅಣ್ಣನನ್ನು ಬಿಡುಗಡೆ ಮಾಡುತ್ತೇನೆ ಮತ್ತು ನೀವು ಈ ದೇಶದಲ್ಲಿ ವ್ಯಾಪಾರ ನಡೆಸಬಹುದು,” ಎಂದು ಹೇಳಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಚಿಕ್ಕ ತಮ್ಮನನ್ನು ನನ್ನ ಬಳಿಗೆ ತನ್ನಿರಿ. ಆಗ ನೀವು ಗೂಢಚಾರರಲ್ಲವೆಂದೂ, ಯಥಾರ್ಥರೆಂದೂ ತಿಳಿದುಕೊಂಡು, ನಿಮ್ಮ ಸಹೋದರರನ್ನು ನಿಮಗೆ ಒಪ್ಪಿಸುವೆನು. ಆಗ ನೀವು ದೇಶದಲ್ಲಿ ವ್ಯಾಪಾರ ಮಾಡಬಹುದು,’ ಎಂದು ಹೇಳಿದನು,” ಎಂದರು.