Genesis 42:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರೂಬೇನನು ತನ್ನ ತಂದೆಗೆ, “ಅಪ್ಪಾ, ನಾನು ಬೆನ್ಯಾಮೀನನನ್ನು ಕರೆದುಕೊಂಡು ಬರದಿದ್ದರೆ ನೀನು ನನ್ನ ಇಬ್ಬರು ಗಂಡುಮಕ್ಕಳನ್ನು ಕೊಲ್ಲಬಹುದು. ನನ್ನನ್ನು ನಂಬು. ನಾನು ಬೆನ್ಯಾಮೀನನನ್ನು ನಿನ್ನ ಬಳಿಗೆ ಕರೆದುಕೊಂಡು ಬರುವೆನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರೂಬೇನನು ತನ್ನ ತಂದೆಗೆ, “ನಾನು ಈ ಹುಡುಗನನ್ನು ತಿರುಗಿ ತಂದು ಒಪ್ಪಿಸದೆ ಹೋದರೆ ನನ್ನ ಇಬ್ಬರು ಗಂಡುಮಕ್ಕಳನ್ನು ಕೊಂದು ಹಾಕಬಹುದು. ಇವನನ್ನು ನನ್ನ ವಶಕ್ಕೆ ಕೊಟ್ಟರೆ ನಾನು ತಪ್ಪದೆ ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬರುತ್ತೇನೆ” ಎಂದು ಹೇಳಿದನು.
Kannada BSI Bible 2016
ರೂಬೇನನು ತನ್ನ ತಂದೆಗೆ--ನಾನು ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ ನನ್ನ ಇಬ್ಬರು ಕುಮಾರರನ್ನು ಕೊಂದುಬಿಡು. ನೀನು ಅವನನ್ನು ನನ್ನ ಕೈಯಲ್ಲಿ ಒಪ್ಪಿಸು. ನಾನು ಅವನನ್ನು ನಿನ್ನ ಬಳಿಗೆ ತಿರಿಗಿ ತರುವೆನು ಅಂದನು.ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಈ ಹುಡುಗನನ್ನು ತಿರಿಗಿ ತಂದು ಒಪ್ಪಿಸದೆ ಹೋದರೆ ನನ್ನಿಬ್ಬರು ಗಂಡು ಮಕ್ಕಳನ್ನು ಕೊಂದು ಹಾಕಬಹುದು; ಇವನನ್ನು ನನ್ನ ವಶಕ್ಕೆ ಕೊಟ್ಟರೆ ನಾನು ತಪ್ಪದೆ ಇವನನ್ನು ನಿನ್ನ ಬಳಿಗೆ ಕರಕೊಂಡು ಬರುತ್ತೇನೆ ಎಂದು ಹೇಳಿದನು.
Kannada Bible (KNCL) BSI 2016
ಅದಕ್ಕೆ ರೂಬೇನನು, “ನಾನು ಈ ಹುಡುಗನನ್ನು ನಿಮಗೆ ಪುನಃ ತಂದೊಪ್ಪಿಸುತ್ತೇನೆ; ಇಲ್ಲದೆಹೋದರೆ ನನ್ನಿಬ್ಬರು ಗಂಡುಮಕ್ಕಳನ್ನು ಕೊಂದುಹಾಕಬಹುದು. ಇವನನ್ನು ನನ್ನ ವಶಕ್ಕೆ ಕೊಡಿ, ನಾನು ತಪ್ಪದೆ ಇವನನ್ನು ನಿಮ್ಮ ಬಳಿಗೆ ಕರೆದುಕೊಂಡು ಬರುತ್ತೇನೆ,” ಎಂದು ಹೇಳಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರೂಬೇನನು ತನ್ನ ತಂದೆಗೆ, “ನಾನು ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ, ನನ್ನ ಇಬ್ಬರು ಪುತ್ರರನ್ನು ಕೊಂದುಬಿಡು. ನೀನು ಬೆನ್ಯಾಮೀನನನ್ನು ನನ್ನ ಕೈಯಲ್ಲಿ ಒಪ್ಪಿಸು. ನಾನು ಅವನನ್ನು ನಿನ್ನ ಬಳಿಗೆ ತಿರುಗಿ ತರುವೆನು,” ಎಂದನು.