Genesis 42:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೋಬನು, “ನಾನು ನಿಮ್ಮೊಂದಿಗೆ ಬೆನ್ಯಾಮೀನನನ್ನು ಕಳುಹಿಸಿಕೊಡುವುದಿಲ್ಲ. ಅವನ ಸಹೋದರನು ಸತ್ತುಹೋದನು; ನನ್ನ ಹೆಂಡತಿಯಾದ ರಾಹೇಲಳಲ್ಲಿ ಹುಟ್ಟಿದ ಗಂಡುಮಕ್ಕಳಲ್ಲಿ ಇವನೊಬ್ಬನೇ ಉಳಿದಿರುವುದು. ಈಜಿಪ್ಟಿಗೆ ಪ್ರಯಾಣ ಮಾಡುವಾಗ ಇವನಿಗೆ ಅಪಾಯ ಸಂಭವಿಸಿದರೆ ವಯಸ್ಸಾದ ನಾನು ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣವಾಗುವಿರಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಯಾಕೋಬನು ಅವರಿಗೆ, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದವನು ಸತ್ತು ಹೋದನು. ಇವನೊಬ್ಬನೇ ಉಳಿದಿದ್ದಾನೆ. ಮಾರ್ಗದಲ್ಲಿ ಇವನಿಗೇನಾದರೂ ಕೇಡಾದರೆ ಈ ಮುದಿ ತಲೆ ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ” ಎಂದು ಹೇಳಿದನು.
Kannada BSI Bible 2016
ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಯಾಕೋಬನು ಅವರಿಗೆ - ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಇವನ ಒಡಹುಟ್ಟಿದವನು ಸತ್ತು ಹೋದನು; ಇವನೊಬ್ಬನೇ ಉಳಿದಿದ್ದಾನೆ; ಮಾರ್ಗದಲ್ಲಿ ಇವನಿಗೇನಾದರೂ ಕೇಡಾದರೆ ಈ ಮುದಿತಲೆ ದುಃಖದಿಂದಲೇ ಪಾತಾಳಕ್ಕೆ ಸೇರಲು ನೀವು ಕಾರಣವಾಗುವಿರಿ ಎಂದು ಹೇಳಿದನು.
Kannada Bible (KNCL) BSI 2016
ಯಕೋಬನು ಅವರಿಗೆ, “ನನ್ನ ಮಗ ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದ ಅವನು ಸತ್ತುಹೋದ, ಇವನೊಬ್ಬನೇ ಉಳಿದು ಇದ್ದಾನೆ, ದಾರಿಯಲ್ಲಿ ಇವನಿಗೇನಾದರೂ ಆಪತ್ತು ಸಂಭವಿಸಬಹುದು. ಆಗ, ನರೆಕೂದಲಿನ ಈ ಮುದುಕ ದುಃಖದಿಂದಲೆ ಸಮಾಧಿ ಸೇರಲು ನೀವೇ ಕಾರಣರಾಗುತ್ತೀರಿ,” ಎಂದು ಹೇಳಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯಾಕೋಬನು, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು, ಅವನ ಅಣ್ಣ ಸತ್ತು ಹೋಗಿ, ಇವನೊಬ್ಬನೇ ಉಳಿದಿದ್ದಾನೆ. ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ, ನನ್ನ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ಇಳಿಸುವಿರಿ,” ಎಂದನು.