Genesis 42:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೋಬನು ಬೆನ್ಯಾಮೀನನನ್ನು ಕಳುಹಿಸಲಿಲ್ಲ. (ಬೆನ್ಯಾಮೀನನು ಯೋಸೇಫನ ಒಡಹುಟ್ಟಿದ ಒಬ್ಬನೇ ತಮ್ಮನಾಗಿದ್ದನು.) ಬೆನ್ಯಾಮೀನನಿಗೆ ಏನಾದರೂ ಕೇಡಾಗಬಹುದೆಂಬ ಭಯ ಯಾಕೋಬನಿಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಯಾಕೋಬನು ಯೋಸೇಫನ ತಮ್ಮನಾದ ಬೆನ್ಯಾಮೀನನಿಗೆ “ಕೇಡು ಉಂಟಾದೀತೆಂದು” ಹೇಳಿ ಅಣ್ಣಂದಿರ ಜೊತೆಯಲ್ಲಿ ಕಳುಹಿಸಲಿಲ್ಲ.
Kannada BSI Bible 2016
ಆದರೆ ಯಾಕೋಬನು ಯೋಸೆಫನ ತಮ್ಮನಾದ ಬೆನ್ಯಾವಿಾನ ನಿಗೆ ಕೇಡುಬಂದೀತು ಎಂದು ಹೇಳಿ ಅಣ್ಣಂದಿರ ಸಂಗಡ ಅವನನ್ನು ಕಳುಹಿಸಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಯಾಕೋಬನು ಯೋಸೇಫನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ಅವನಿಗೆ ಕೆಡುಕುಂಟಾದೀತೆಂದು ಹೇಳಿ ಅಣ್ಣಂದಿರ ಜೊತೆಯಲ್ಲಿ ಕಳುಹಿಸಲಿಲ್ಲ.
Kannada Bible (KNCL) BSI 2016
ಆದರೆ ಜೋಸೆಫನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ಯಕೋಬನು ಅವರ ಸಂಗಡ ಕಳಿಸಲಿಲ್ಲ. ಏಕೆಂದರೆ, ಅವನಿಗೆ ಏನಾದರೂ ಆಪತ್ತು ಒದಗೀತೆಂಬ ಹೆದರಿಕೆ ಅವನದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೋಸೇಫನ ಸಹೋದರನಾದ ಬೆನ್ಯಾಮೀನನನ್ನು ಕಳುಹಿಸಲಿಲ್ಲ. ಏಕೆಂದರೆ ಅವನಿಗೆ ಕೇಡು ಬಂದೀತೆಂದು ಹೇಳಿ, ಯಾಕೋಬನು ಅವನನ್ನು ಅವನ ಸಹೋದರರ ಸಂಗಡ ಕಳುಹಿಸಲಿಲ್ಲ.