Genesis 42:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಾನಾನಿನಲ್ಲಿ ಬರಗಾಲ ಭೀಕರವಾಗಿತ್ತು. ಆದ್ದರಿಂದ ದವಸಧಾನ್ಯಗಳನ್ನು ಕೊಂಡುಕೊಳ್ಳಲು ಅನೇಕ ಜನರು ಕಾನಾನಿನಿಂದ ಈಜಿಪ್ಟಿಗೆ ಹೋದರು; ಇಸ್ರೇಲನ ಗಂಡುಮಕ್ಕಳೂ ಅವರೊಂದಿಗೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಧಾನ್ಯವನ್ನು ಕೊಂಡುಕೊಳ್ಳುವುದಕ್ಕೋಸ್ಕರ ಐಗುಪ್ತ ದೇಶಕ್ಕೆ ಬಂದವರಲ್ಲಿ ಇಸ್ರಾಯೇಲನ ಮಕ್ಕಳೂ ಇದ್ದರು, ಏಕೆಂದರೆ ಕಾನಾನ್ ದೇಶದಲ್ಲಿಯೂ ಬರವಿತ್ತು.
Kannada BSI Bible 2016
ಕಾನಾನ್ ದೇಶದಲ್ಲಿ ಬರವಿದ್ದದರಿಂದ ಧಾನ್ಯ ವನ್ನು ಕೊಂಡುಕೊಳ್ಳುವದಕ್ಕಾಗಿ ಬರುವವರೊಂದಿಗೆ ಇಸ್ರಾಯೇಲನ ಕುಮಾರರು ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಧಾನ್ಯವನ್ನು ಕೊಂಡುಕೊಳ್ಳುವದಕ್ಕೋಸ್ಕರ ಐಗುಪ್ತದೇಶಕ್ಕೆ ಬಂದವರಲ್ಲಿ ಇಸ್ರಾಯೇಲನ ಮಕ್ಕಳೂ ಇದ್ದರು; ಕಾನಾನ್ ದೇಶದಲ್ಲಿಯೂ ಬರವಿತ್ತಷ್ಟೆ.
Kannada Bible (KNCL) BSI 2016
ಕಾನಾನ್ ನಾಡಿನಲ್ಲೂ ಬರವಿತ್ತು. ಧಾನ್ಯ ಕೊಂಡುಕೊಳ್ಳಲು ಅಲ್ಲಿಂದ ಈಜಿಪ್ಟಿಗೆ ಬಂದವರಲ್ಲಿ ಯಕೋಬನ (ಇಸ್ರಯೇಲನ) ಮಕ್ಕಳೂ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಾನಾನ್ ದೇಶದಲ್ಲಿ ಬರವಿದ್ದುದರಿಂದ ಧಾನ್ಯವನ್ನು ಕೊಂಡುಕೊಳ್ಳುವುದಕ್ಕೆ ಬರುವವರೊಂದಿಗೆ ಇಸ್ರಾಯೇಲನ ಪುತ್ರರೂ ಬಂದರು.