Genesis 42:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಸೇಫನು ಈಜಿಪ್ಟಿನ ರಾಜ್ಯಪಾಲನಾಗಿದ್ದರಿಂದ ಅವನ ಅನುಮತಿಯಿಲ್ಲದೆ ದವಸಧಾನ್ಯಗಳನ್ನು ಕೊಂಡುಕೊಳ್ಳಲು ಯಾರಿಗೂ ಸಾಧ್ಯವಿರಲಿಲ್ಲ. ಯೋಸೇಫನ ಸಹೋದರರು ಬಂದು ಅವನ ಮುಂದೆ ಅಡ್ಡಬಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐಗುಪ್ತ ದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರುವವನು ಯೋಸೇಫನೇ ಆಗಿದ್ದನು. ಹೀಗಿರುವುದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.
Kannada BSI Bible 2016
ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾ ಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರು ವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐಗುಪ್ತದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರಿಸುವವನು ಯೋಸೇಫನೇ. ಹೀಗಿರುವದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.
Kannada Bible (KNCL) BSI 2016
ಆಗ ಈಜಿಪ್ಟ್ ದೇಶದಲ್ಲಿ ಅಧಿಕಾರ ನಡೆಸುತ್ತಿದ್ದವನು ಹಾಗೂ ಜನರಿಗೆ ದವಸಧಾನ್ಯ ಮಾರಾಟ ಮಾಡಿಸುತ್ತಿದ್ದವನು ಜೋಸೆಫನೇ. ಇಂತಿರಲು ಅವನ ಅಣ್ಣಂದಿರು ಬಂದು ಅವನ ಮುಂದೆ ನೆಲದವರೆಗೂ ಬಾಗಿ ನಮಸ್ಕರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರುವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು, ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.