Genesis 42:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಸೇಫನು ಅವರನ್ನು ಕಂಡು, ತನ್ನ ಅಣ್ಣಂದಿರೆಂದು ತಿಳಿದುಕೊಂಡನು. ಆದರೂ ಅವನು ತನಗೆ ಅವರು ಗೊತ್ತೇ ಇಲ್ಲದಂತೆ ಅವರೊಂದಿಗೆ ಕಟುವಾಗಿ ಮಾತಾಡಿ, ಅವರಿಗೆ, “ನೀವು ಎಲ್ಲಿಂದ ಬಂದಿರುವಿರಿ?” ಎಂದು ಕೇಳಿದನು. ಸಹೋದರರು, “ಆಹಾರವನ್ನು ಕೊಂಡುಕೊಳ್ಳಲು ಕಾನಾನ್ ದೇಶದಿಂದ ಬಂದಿದ್ದೇವೆ” ಎಂದು ಉತ್ತರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಸೇಫನು ಅವರನ್ನು ಕಂಡಾಗ ಅವರ ಗುರುತು ಹಿಡಿದು ತನ್ನ ಅಣ್ಣಂದಿರೆಂದು ತಿಳಿದರೂ ಅವರಿಗೆ ಅನ್ಯನಂತೆ ತೋರ್ಪಡಿಸಿಕೊಂಡು ಕಠಿಣ ನುಡಿಯಿಂದ, “ನೀವು ಎಲ್ಲಿಂದ ಬಂದವರು” ಎಂದು ಕೇಳಿದನು. ಅವರು, “ಧಾನ್ಯವನ್ನು ಕೊಂಡುಕೊಳ್ಳುವುದಕ್ಕೊಸ್ಕರ ಕಾನಾನ್ ದೇಶದಿಂದ ಬಂದಿದ್ದೇವೆ” ಎಂದರು.
Kannada BSI Bible 2016
ಯೋಸೇ ಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದಾಗ್ಯೂ ತಿಳಿಯದವನ ಹಾಗೆ ಅನ್ಯನಂತೆ ಕಠಿಣವಾದ ಮಾತುಗಳನ್ನಾಡಿ ಅವರಿಗೆ--ಎಲ್ಲಿಂದ ಬಂದಿರಿ ಅಂದನು. ಅದಕ್ಕೆ ಅವರು--ಆಹಾರ ಕೊಂಡುಕೊಳ್ಳುವದಕ್ಕೆ ಕಾನಾನ್‌ ದೇಶದಿಂದ ಬಂದೆವು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಸೇಫನು ಅವರನ್ನು ಕಂಡಾಗ ಅವರ ಗುರುತು ಹಿಡಿದು ತನ್ನ ಅಣ್ಣಂದಿರೆಂದು ತಿಳಿದಾಗ್ಯೂ ಅವರಿಗೆ ಅನ್ಯನಂತೆ ತೋರ್ಪಡಿಸಿಕೊಂಡು ಬಿರುನುಡಿಯಿಂದ - ನೀವು ಎಲ್ಲಿಂದ ಬಂದವರು ಎಂದು ಕೇಳಿದನು. ಅವರು - ಧಾನ್ಯವನ್ನು ಕೊಂಡುಕೊಳ್ಳುವದಕ್ಕೋಸ್ಕರ ಕಾನಾನ್ ದೇಶದಿಂದ ಬಂದಿದ್ದೇವೆ ಅಂದರು.
Kannada Bible (KNCL) BSI 2016
ಜೋಸೆಫನು ಅವರನ್ನು ನೋಡಿದಕೂಡಲೆ ಗುರುತುಹಿಡಿದನು. ಆದರೂ ಅವರ ಪರಿಚಯ ಇಲ್ಲದವನಂತೆ ಬಿರುಬುಡಿಯಿಂದ, “ನೀವು ಎಲ್ಲಿಯವರು?” ಎಂದು ಕೇಳಿದನು. ಅವರು, “ನಾವು ಧಾನ್ಯ ಕೊಂಡುಕೊಳ್ಳುವುದಕ್ಕಾಗಿ ಕಾನಾನ್ ನಾಡಿನಿಂದ ಬಂದವರು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಸೇಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದರೂ, ತಿಳಿಯದವನ ಹಾಗೆ ಅನ್ಯನಂತೆ ಕಠಿಣವಾದ ಮಾತುಗಳನ್ನಾಡಿ, ಅವರಿಗೆ, “ಎಲ್ಲಿಂದ ಬಂದಿರಿ?” ಎಂದನು. ಅದಕ್ಕೆ ಅವರು, “ಆಹಾರ ಕೊಂಡುಕೊಳ್ಳುವುದಕ್ಕೆ ಕಾನಾನ್ ದೇಶದಿಂದ ಬಂದೆವು,” ಎಂದರು.